ಬ್ರೇಕಿಂಗ್ ನ್ಯೂಸ್
31-05-22 04:16 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಹಿಜಾಬ್ ಪರ ಹೋರಾಟ ನಡೆಸುತ್ತಿರುವ ಹಂಪನಕಟ್ಟೆ ವಿವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ನನ್ನಿಂದಾದ ನೆರವು ನೀಡಿದ್ದೇನೆ. ಆದರೂ, ತಮ್ಮ ಸಹಾಯಕ್ಕೆ ಬಂದಿಲ್ಲ. ನಾನು ಕ್ರಿಕೆಟ್ ಆಟದಲ್ಲಿ ನಿರತನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದರ ಹಿಂದೆ ದುರುದ್ದೇಶ ಅಥವಾ ರಾಜಕೀಯ ಪ್ರೇರಣೆ ಇದೆಯೋ ಗೊತ್ತಿಲ್ಲ. ಹೆತ್ತವರೇ ಇವರ ಬಗ್ಗೆ ಕಾಳಜಿ ವಹಿಸಬೇಕೆಂದು ವಿಧಾನಸಭೆ ವಿಪಕ್ಷ ಉಪ ನಾಯಕ, ಶಾಸಕ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸುವ ವಿಚಾರದಲ್ಲಿ ಪದವಿ ಕಾಲೇಜಿನ 16 ವಿದ್ಯಾರ್ಥಿನಿಯರು ಹೈಡ್ರಾಮ ನಡೆಸುತ್ತಿದ್ದು ಸೋಮವಾರ ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಜಿಲ್ಲಾಧಿಕಾರಿಗಳಲ್ಲೂ ತಮ್ಮ ಸಮಸ್ಯೆಗೆ ಪರಿಹಾರ ಸಿಗದೆ ಶಾಸಕ ಯು.ಟಿ ಖಾದರ್ ಅವರೂ ತಮ್ಮ ಸಹಾಯಕ್ಕೆ ಬಾರದೆ ಅಡ್ಯಾರಿನಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾಟದಲ್ಲಿ ನಿರತರಾಗಿರುವುದಾಗಿ ವಿದ್ಯಾರ್ಥಿನಿಯರು ಆರೋಪಿಸಿದ್ದರು.

ವಿದ್ಯಾರ್ಥಿನಿಯರ ಆರೋಪಕ್ಕೆ ಶಾಸಕ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಅವರ ಹೇಳಿಕೆಯ ಹಿನ್ನಲೆಯನ್ನು ತಿಳಿದುಕೊಳ್ಳಬೇಕಾಗುತ್ತದೆ. ನನಗೆ ವಿದ್ಯಾರ್ಥಿನಿಯರ ಕರೆ ಬಂದಾಗ ನನ್ನಿಂದಾದ ನೆರವು ನೀಡಿದ್ದೇನೆ. ವಿ.ಸಿ, ಜಿಲ್ಲಾಧಿಕಾರಿ ಜೊತೆ ಮಾತುಕತೆಗೆ ಸಹಾಯ ಮಾಡಿದ್ದೇನೆ. ವಿದ್ಯಾರ್ಥಿನಿಯರಿಗೆ ಕಾನೂನನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಅವಕಾಶ ಇಲ್ಲ ಎಂದೂ ಹೇಳಿದ್ದು, ಕಾನೂನು ಪ್ರಕಾರ ಹೋರಾಟ ಮಾಡಲು ಸೂಚಿಸಿದ್ದೇನೆ.

ಆಬಳಿಕ ವಿದ್ಯಾರ್ಥಿನಿಯರು ಒಂದು ವಾರ ನನ್ನನ್ನು ಸಂಪರ್ಕ ಮಾಡಿಲ್ಲ. ಆಮೇಲೆ ನಾನೇ ವಿಸಿ ಜೊತೆ ಪೋನ್ ಮಾಡಿ ಮಾತನಾಡಿದ್ದು, ವಿದ್ಯಾರ್ಥಿನಿಯರಿಗೆ ಕಚೇರಿಯಿಂದ ಪೋನ್ ಮಾಡಿಸಿದ್ದಲ್ಲದೆ, ನಾನೇ ಖುದ್ದು ಫೋನ್ ಮಾಡಿದ್ದೇನೆ. ಆದರೆ ವಿದ್ಯಾರ್ಥಿನಿಯರು ಕರೆ ಸ್ವೀಕಾರ ಮಾಡದೆ ರಾಂಗ್ ನಂಬರ್ ಅಂತ ಹೇಳಿ ಕರೆ ಕಟ್ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸರ್ಕಾರದ ಚೀಫ್ ಸೆಕ್ರೆಟರಿ ಜೊತೆ ಮಾತನಾಡಿದ್ದು, ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸೋದು ಹೆತ್ತವರು, ಅವರ ಶಾಲೆಯ ಫೀಸ್ ಕಟ್ಟೋದು ಹೆತ್ತವರು, ಅವರಿಗೆ ಡ್ರೆಸ್ ಕೊಡೋದು ಹೆತ್ತವರು, ಅವರಿಗೆ ಪುಸ್ತಕ ನೀಡೋದು ಕೂಡ ಹೆತ್ತವರು. ಈ ಸಮಸ್ಯೆಗೂ ಹೆತ್ತವರು ಮುಂದೆ ಬಂದು ಸಮಸ್ಯೆ ಬಗೆಹರಿಸಲಿ. ಕಾನೂನು ವಿರುದ್ಧವಾಗಿ ನಾನು ಯಾವುದೇ ರೀತಿಯ ಸಹಾಯ ಮಾಡುವುದಿಲ್ಲ ಎಂದರು.
Hijab row in Mangalore university, MLA UT Khader says am helpless. Dr Rajendra KV, Dakshina Kannada Deputy Commissioner (DC) on Monday, May 30, informed 12 Muslim girl students of University College Mangalore, an institution which is affiliated to Mangalore University, to follow the court order and syndicate decision banning hijab inside the classrooms.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm