ಬ್ರೇಕಿಂಗ್ ನ್ಯೂಸ್
31-05-22 10:33 pm Mangalore Correspondent ಕರಾವಳಿ
ಮಂಗಳೂರು, ಮೇ 31 : ಮೊಘಲರ ಆಡಳಿತ ಕೊನೆಗೊಂಡಿದ್ದು ಅವರ ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟಿಷರ ಕಾರಣದಿಂದ. ಮೊಘಲರ ಸಹಿಷ್ಣುತೆಯ ಕಾರಣದಿಂದಾಗಿ ಭಾರತದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ್ದರು. ದೇಶವನ್ನು 16 ವರ್ಷ ಆಳ್ವಿಕೆ ಮಾಡಿದ್ದು ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರು. ಆದರೆ ವರ್ತಮಾನ ಕಾಲದಲ್ಲಿ ಕಾಂಗ್ರೆಸ್‌ನ ಮೃದು ಹಿಂದುತ್ವ ಕಾಣುವಾಗ ಬೇಸರವಾಗುತ್ತದೆ. ವಾಜಪೇಯಿ ಆಡಳಿತ ಮಾಡಬೇಕಾದರೆ ಭಾರತ ಈಗಿನ ಮಟ್ಟದಲ್ಲಿ ಕೋಮು ಧ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ಈ ರೀತಿ ಕೋಮು ಧ್ರುವೀಕರಣ ಮಾಡಿರಲಿಲ್ಲ. ಸಹಿಷ್ಣುತೆ, ಜಾತ್ಯತೀತೆಗೆ ವಾಜಪೇಯಿ ಬದ್ಧರಾಗಿದ್ದರು. ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸರ್ಕಾರ, ವರ್ಗವನ್ನು ತಿರಸ್ಕಾರ ಮಾಡುತ್ತಾ ಬಂದಿದೆ ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ, ಶಾಸಕ ಡಾ. ಕೆ.ಟಿ. ಜಲೀಲ್ ಹೇಳಿದರು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜನೆ ಮಾಡಿದ ರಾಜ್ಯಮಟ್ಟದ ಮುಸ್ಲಿಂ ಸಮಾವೇಶವನ್ನು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ, ಶಾಸಕ ಡಾ. ಕೆ.ಟಿ. ಜಲೀಲ್ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ. ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌದ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ದೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರು ಶಾ ಜಫಾರ್ ಅವರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿಸಿದ್ದರು ಎಂದು ಜಲೀಲ್ ಹೇಳಿದರು.
ವಿಶ್ವದಾದ್ಯಂತ ಭಾರತ ಗುರುತಿಸಿದ್ದು ಬಹುತ್ವದಿಂದಾಗಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಭಾರತವನ್ನು ಆಡಳಿತ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲ ದೇಶಗಳು ಕೂಡ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಫ್ರಾನ್ಸ್, ಸ್ಪೇನ್‌ನಲ್ಲಿ ಕೂಡ ನಡೆದಿದ್ದು ಇದೇ ಆಗಿದೆ. ಈ ದೇಶ ತೊರೆದು ಹೋದ ಜನರು ತಾವು ನೆಲೆ ನಿಂತ ದೇಶವನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತದಲ್ಲಿ ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.
ನಾವು ಭಾರತ ದೇಶವನ್ನು ಪಾಕಿಸ್ತಾನವನ್ನಾಗಿ ಮಾಡಲು ಶ್ರಮಿಸಬಾರದು. ವಿಭಜನೆಯಾಗಿ ನಿರ್ಮಾಣವಾದ ಪಾಕಿಸ್ತಾನ ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ ಎಂದರು.
ನರೇಂದ್ರ ಮೋದಿ ಸರ್ಕಾರದ ದಮನಕಾರಿ ನೀತಿ ಅಪಾಯಕಾರಿ. ಅದನ್ನು ನಾವು ಪರಾಭವಗೊಳಿಸಬೇಕು. ಎಲ್ಲ ಧರ್ಮಗಳು ಬೇರೆ ಬೇರೆಯಾದರೂ ಒಂದೇ ಜಾತ್ಯಾತೀತ ನಂಬಿಕೆ ಹೊಂದಿದೆ. ಬೈಬಲ್, ಕುರಾನ್, ಭಗವದ್ಗೀತೆ ಒಂದೇ ಭಾವೈಕ್ಯತೆಯನ್ನು ಸಾರುತ್ತದೆ. ನೂರಾರು ವರ್ಷ ಕಾಲ ಆಳಿದ ಬ್ರಿಟಿಷರನ್ನು ಸೋಲಿಸಲು ಸಾಧ್ಯವಾಗುತ್ತದೆ ಎಂದಾದರೆ ಕೇವಲ ಎಂಟು ವರ್ಷ ಆಳಿದ ಮೋದಿ ಸರ್ಕಾರವನ್ನು ಸೋಲಿಸುವುದಕ್ಕೂ ನಮಗೆ ಸಾಧ್ಯವಾಗಲಿದೆ ಎಂದು ಹೇಳಿದರು.
ವಿಶ್ವದ ಎಲ್ಲ ದೇಶಗಳು ಪ್ರಸ್ತುತ ಅಭಿವೃದ್ಧಿಯತ್ತ ಹೆಜ್ಜೆ ಇಟ್ಟಿದೆ. ತೀವ್ರ ಸಂಪ್ರದಾಯವಾದಿ ದೇಶವಾದ ಸೌದಿ ಕೂಡ ಅಭಿವೃದ್ಧಿಯತ್ತ ಮುಖ ಮಾಡಿದೆ. ಎಲ್ಲಾ ಗಲ್ಪ್ ದೇಶಗಳು ತಮ್ಮ ನೀತಿಗಳನ್ನು ಬದಲಿಸುತ್ತಿದೆ. ಆದರೆ ಭಾರತ ಈಗ ಹಿಂದುಳಿದ ರಾಷ್ಟ್ರವಾಗಲು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಾಬರಿ ಮಸೀದಿಯಲ್ಲಿ ಮೂರ್ತಿ ಸಿಕ್ಕಿದೆ ಎಂದು ಯುಪಿ ಮುಖ್ಯಮಂತ್ರಿ ಹೇಳಿದಾಗ, ಪ್ರಧಾನಿ ನೆಹರೂ ಅದನ್ನು ಸರಯೂ ನದಿಯಲ್ಲಿ ಬಿಡುವಂತೆ ಹೇಳಿದ್ದರು. ಆ ರೀತಿಯ ದಿಟ್ಟ ನಿಲುವುಗಳನ್ನು ಕಾಂಗ್ರೆಸ್ ಇತ್ತೀಚೆಗೆ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಬಿಜೆಪಿಯ ಜೊತೆ ಸ್ಪರ್ಧಿಸಲು ತಾನು ಕೂಡ ಕಾವಿ ತೊಡಲು ಮುಂದಾಗಿದೆ ಎಂದು ವಿಷಾದಿಸಿದರು.
ಪ್ರಾಸ್ತಾವಿಕ ಮಾತನಾಡಿದ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ, "ಸಿಪಿಐಎಂ ಪಕ್ಷ ಈ ಸಮಾವೇಶವನ್ನು ಆಯೋಜನೆ ಮಾಡಿರುವುದು ಎಲ್ಲರಿಗೂ ಕುತೂಹಲ ಉಂಟು ಮಾಡಿರಬಹುದು. ಭಾರತ ದೇಶದ ರಾಜಕಾರಣ ಮುಸ್ಲಿಮರ ಸುತ್ತ ಸುತ್ತುತ್ತಿರುವ ಈ ಸಂದರ್ಭದಲ್ಲಿ ಮುಸ್ಲಿಂ ಸಮದಾಯದ ಸಂಕಟವನ್ನು ರಾಜ್ಯಕ್ಕೆ ತಿಳಿಸುವ ಅಗತ್ಯವಿದೆ. ಇದು ಮುಸ್ಲಿಮರ ಸಮಾವೇಶವಲ್ಲ, ಇದು ಮುಸ್ಲಿಂ ಸಮಾವೇಶ ಎಂದು ಹೇಳಿದರು.
ವೇದಿಕೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯಾಧ್ಯಕ್ಷರು, ಹಿರಿಯ ಸಾಹಿತಿ ಡಾ| ಕೆ. ಷರೀಫಾ, ಸಿಪಿಐಎಂ ಕರ್ನಾಟಕ ರಾಜ್ಯ ಕಾರ್ಯದರ್ಶಿ ಯು. ಬಸವರಾಜು, ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ, ಸಾಹಿತಿ ಕೆ ನೀಲಾ, ರಾಜ್ಯ ಮುಖಂಡರು ಕೆ ಎಸ್ ವರಲಕ್ಷ್ಮೀ, ಅಕ್ರಂ ಪಾಶ ಬಾಗೇಪಳ್ಳಿ, ಶೇಖ್ ಷಾ ಖಾದ್ರಿ, ಖಾಸಿಂ ಸರ್ದಾರ್ ರಾಮದುರ್ಗ, ಖಾಸಿಂ ಕೊಪ್ಪಳ, ಉಪಸ್ಥಿತರಿದ್ದರು. ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು ಸಯ್ಯದ್ ಮುಜೀಬ್ ಅಧ್ಯಕ್ಷತೆ ವಹಿಸಿದ್ದರು.
Our country is secular nation. It consists everything. This secular tradition itself is guarding the democracy. All communities have contributed to the development of the country. A country cannot prosper by keeping a community at a distance,” said Dr K T Jaleel, former higher education minister of Kerala and CPIM leader.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm