ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್‌ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm