ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm