ಬ್ರೇಕಿಂಗ್ ನ್ಯೂಸ್
13-06-22 08:40 pm Udupi Correspondent ಕರಾವಳಿ
ಉಡುಪಿ, ಜೂನ್ 13 : ಕರಾವಳಿಯ ರಾಜಕಾರಣದಲ್ಲಿ ಭೀಷ್ಮ ಎಂದೇ ಗುರುತಿಸಲ್ಪಟ್ಟ ರಾಜಕಾರಣಿ ಎಜಿ ಕೊಡ್ಗಿ ಎಂದೇ ಖ್ಯಾತಿ ಪಡೆದಿದ್ದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಮಾನ್ಯ ಕೃಷಿಕ ಕುಟುಂಬದಲ್ಲಿ 1929ರ ಅ.1ರಂದು ಜನಿಸಿದ ಕೊಡ್ಗಿ ಅವರು ಸ್ವಾತಂತ್ರ್ಯ ಹೋರಾಟದ ನಡುವೆ ಬೆಳೆದಿದ್ದರು. ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಸ್ವಾತಂತ್ರ್ಯ ಕಾಲದಲ್ಲಿ ಕಾನೂನು ಪದವಿ ಪಡೆದ ಕೊಡ್ಗಿ ಅವರು ಆರಂಭದಲ್ಲಿ ವಕೀಲರಾಗಿ ಕೆಲಸ ನಿರ್ವಹಿಸಿದ್ದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಆಬಳಿಕ ಸಹಕಾರಿ, ಕೃಷಿ, ರಾಜಕಾರಣ ಜೊತೆ ಜೊತೆಯಾಗಿಯೇ ಗುರುತಿಸಿಕೊಂಡ ಕೊಡ್ಗಿ ರಾಜಕಾರಣದಲ್ಲಿ ಮೆಟ್ಟಿಲೇರಿದ್ದರು.
ಮೊದಲಿಗೆ ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು ಆಗಿನ ಕಾಲದ ಮಂಗಳೂರು ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು. 1972 ಮತ್ತು 78 ರಲ್ಲಿ ಎರಡು ಬಾರಿಗೆ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1993ರಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಉಪಾಧ್ಯಕ್ಷ ಸಹಿತ ಹಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್ ಭದ್ರಕೋಟೆಯನ್ನು ಛಿದ್ರಮಾಡಿ ಬಿಜೆಪಿಗೆ ಬಾಗಿಲು ತೆರೆದ ಕೀರ್ತಿ ಕೊಡ್ಗಿಯವರಿಗೆ ಸಲ್ಲುತ್ತದೆ. ಸುಮಾರು 57 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದುದು ಅವರ ವಿಶೇಷ.
2006-08ರ ಅವಧಿಯಲ್ಲಿ ರಾಜ್ಯ ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾತಿ ಮೂಡಿಸಿರುವ ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
A well-known political personality, A G Kodgi, who was known as Bheeshma of Coastal Politics breathed his last at the age of 93 years at Kasturba Hospital, Manipal on Monday June 13. He was undergoing treatment for dengue at the hospital. However, he succumbed on Monday. A political veteran Gopalakrishna Kodgi well-known as A G Kodgi was an LLB graduate, a revolutionary agriculturist, a senior in politics, a good orator, a journalist and had great vision on various matters
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm