ಬ್ರೇಕಿಂಗ್ ನ್ಯೂಸ್
17-06-22 11:18 am Udupi Correspondent ಕರಾವಳಿ
ಉಡುಪಿ, ಜೂನ್ 17: ರಾಜ್ಯಾದ್ಯಂತ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಎಂಬಾತನ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಉಡುಪಿಯ ಕೊರಂಗ್ರಪಾಡಿಯಲ್ಲಿರುವ ವೈಭವೋಪೇತ ಮನೆಗೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಇಂಜಿನಿಯರ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಅಡಗಿಸಿಟ್ಟಿದ್ದ ಎರಡು ಕೇಜಿಗೂ ಹೆಚ್ಚು ಚಿನ್ನವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.



ಮನೆಯಲ್ಲಿ ಇರಿಸಿಕೊಂಡಿದ್ದ ಸುಮಾರು 5 ಲಕ್ಷ ರೂಪಾಯಿ ನಗದನ್ನು ಪತ್ತೆ ಮಾಡಲಾಗಿದೆ. ಅಲ್ಲದೆ, ಚಿನ್ನದ ತಟ್ಟೆ, ಚಿನ್ನದ ತಗಡು, ಅಪಾರ ಪ್ರಮಾಣದ ಆಭರಣಗಳು ಪತ್ತೆಯಾಗಿವೆ. 15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಚಿನ್ನದ ಸರಗಳು, ನೆಕ್ಲೆಸ್, ಬ್ರಾಸ್ಲೇಟ್ ಪತ್ತೆಯಾಗಿವೆ. ಇದಲ್ಲದೆ, ಚಿನ್ನದ ಬೇರೆ ಬೇರೆ ರೀತಿಯ ಒಡವೆಗಳು, ಉಂಗುರ, ದೇವರ ಮೂರ್ತಿಯನ್ನೂ ಪತ್ತೆ ಮಾಡಲಾಗಿದೆ. ಹಲವಾರು ಕಡೆ ಮಾಡಿಟ್ಟಿರುವ ಆಸ್ತಿ, ದಾಖಲೆ ಪತ್ರಗಳನ್ನೂ ವಶಕ್ಕೆ ಪಡೆದಿದ್ದಾರೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡ ಈ ದಾಳಿಯನ್ನು ಮಾಡಿದ್ದು, ಬೆಳ್ಳಂಬೆಳಗ್ಗೆ ಭ್ರಷ್ಟ ಇಂಜಿನಿಯರ್ ಗೆ ಶಾಕ್ ಕೊಟ್ಟಿದೆ.
ACB sleuths who raided the house of assistant engineer of irrigation department Harish at Korangrapadi on Friday June 17, have unearthed huge valuables and cash.The ABC officials found more than two kg of gold, Rs five lac cash, high-end watches, three vehicles, golden plate, golden eating utensil, more than 15 golden bangles, more than 30 golden chains, necklace, bracelet, other golden ornaments, finger rings and a gold idol.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm