ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.



ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm