ಬ್ರೇಕಿಂಗ್ ನ್ಯೂಸ್
25-06-22 10:56 am Mangalore Correspondent ಕರಾವಳಿ
ಮಂಗಳೂರು, ಜೂನ್ 25 : ನಗರದಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ದಿಢೀರ್ ರದ್ದು ಪಡಿಸಲಾಗಿದೆ. ಎಡಪಂಥೀಯ, ಕಾಂಗ್ರೆಸ್, ಇನ್ನಿತರ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ ವಿವಾದಕ್ಕೆ ಆಸ್ಪದ ನೀಡುವುದು ಬೇಡವೆಂದು ಆಯೋಜಕರು ಕಾರ್ಯಕ್ರಮವನ್ನೆ ರದ್ದು ಪಡಿಸಿದ್ದಾರೆ.
ಇಂದು (ಜೂನ್ 25) ಸಂಜೆ 4.30ಕ್ಕೆ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಸೇವಾಂಜಲಿ ಟ್ರಸ್ಟ್ ವತಿಯಿಂದ ಪಠ್ಯಪುಸ್ತಕ ರಚನಾ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ನಾಗರಿಕ ಸನ್ಮಾನ ಏರ್ಪಡಿಸುವ ಕಾರ್ಯಕ್ರಮ ಆಯೋಜಿಸಿತ್ತು. ಆದರೆ ಪಠ್ಯಪುಸ್ತಕದಲ್ಲಿ ನಾರಾಯ ಗುರು, ಕುವೆಂಪು, ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆಂದು ಆರೋಪ ವ್ಯಕ್ತವಾಗಿದ್ದರಿಂದ ಕರಾವಳಿಯಲ್ಲಿ ಕಾಂಗ್ರೆಸ್ ಸೇರಿದಂತೆ ಎಡಪಂಥೀಯ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಇದೀಗ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಾಗರಿಕ ಸನ್ಮಾನ ಏರ್ಪಡಿಸಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿ ಪಿ.ಎಸ್ ಯಡಪಡಿತ್ತಾಯ ವಹಿಸಿಕೊಂಡಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು. ಸಮಾನ ಮನಸ್ಕ ಸಂಘಟನೆಗಳ ನಾಯಕರು ಶುಕ್ರವಾರ ಸಂಜೆ ತುರ್ತು ಸಭೆ ನಡೆಸಿ, ನಾಗರಿಕ ಸನ್ಮಾನ ಕೈಬಿಡಬೇಕು, ಇಲ್ಲದೇ ಇದ್ದಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬೆದರಿಕೆಯನ್ನು ಒಡ್ಡಿದ್ದವು.
ಪಠ್ಯಪುಸ್ತಕದಲ್ಲಿ ದಾರ್ಶನಿಕರಿಗೆ ಅವಮಾನ ಮಾಡಿದ ವ್ಯಕ್ತಿಗೆ ಸನ್ಮಾನಿಸುವುದು ಮಂಗಳೂರಿನ ಜನ ತಲೆತಗ್ಗಿಸುವ ವಿಚಾರ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಇಂದು ಸಂಜೆ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧತೆ ನಡೆಸಿದ್ದವು. ಇದರ ಬೆನ್ನಲ್ಲೇ ವಿವಾದಿತ ಕಾರ್ಯಕ್ರಮವನ್ನೇ ಆಯೋಜಕರು ರದ್ದುಪಡಿಸಿದ್ದು ಶಾಂತಿ ಸುವ್ಯವಸ್ಥೆ ಭಂಗ ಪಡಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
Rohith Chakrathirtha to get civic reception in Mangalore cancelled after strong opposition. Deshapremi Sanghatanegala Okkoota (DSO) has decided to hold a protest rally against the felicitation programme organised for Textbooks Review Committee former chairman Rohith Chakrathirtha on Saturday. Sevanjali Charitable Trust had organised a civic reception for Chakrathirtha at Bhuvanendra Hall of Canara High School in Dongarakeri, at 5pm on Saturday. Mangalore University vice-chancellor P S Yadapadithaya was to preside. Deshapremi Sanghatanegala Okkoota (DSO) has decided to hold a protest rally against the felicitation programme organised for Textbooks Review Committee former chairman Rohith Chakrathirtha on Saturday. Sevanjali Charitable Trust has organised a civic reception for Chakrathirtha at Bhuvanendra Hall of Canara High School in Dongarakeri, at 5pm on Saturday. Mangalore University vice-chancellor P S Yadapadithaya will preside.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm