ಬ್ರೇಕಿಂಗ್ ನ್ಯೂಸ್
27-06-22 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಕರಾವಳಿಯಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್ ಬಳಕೆ ಪತ್ತೆಯಾಗುತ್ತಿರುವ ಬಗ್ಗೆ ಕೇಂದ್ರ ಸರಕಾರ ಗಂಭೀರ ವಹಿಸಿದೆ. ಆದರೆ, ಕೆಲವೊಮ್ಮೆ ಅರಬ್ಬೀ ಸಮುದ್ರದಲ್ಲಿ ತೆರಳುವ ಹಡಗಿನಲ್ಲಿ ಸಿಬಂದಿ ಬಳಸುವ ಸ್ಯಾಟಲೈಟ್ ಫೋನ್ ಸಿಗ್ನಲ್ ಕೂಡ ತಪ್ಪಾಗಿ ತೋರಿಸುವ ಸಾಧ್ಯತೆ ಇರುತ್ತದೆ. ಅಕ್ಷಾಂಶ, ರೇಖಾಂಶದಲ್ಲಿ ಲೆಕ್ಕ ಹಾಕಿದ್ದು ತಪ್ಪಾಗಿ ಬಂದಲ್ಲಿ ಭೂ ಪ್ರದೇಶವನ್ನು ತೋರಿಸುತ್ತದೆ. ಹಾಗಿದ್ದರೂ, ಕರಾವಳಿಯಲ್ಲಿ ಉಗ್ರರ ಚಟುವಟಿಕೆ ಹಿಂದೆ ಇದ್ದುದರಿಂದ ಭದ್ರತಾ ವಿಭಾಗಗಳು ಈ ಬಗ್ಗೆ ಜಾಗ್ರತೆ ವಹಿಸಿ ತನಿಖೆ ನಡೆಸುತ್ತವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವರು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಅನ್ವರ್ ಮಾಣಿಪ್ಪಾಡಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಯಾರನ್ನೂ ಟಾರ್ಗೆಟ್ ಮಾಡುವ ಉದ್ದೇಶ ಸರಕಾರಕ್ಕಿಲ್ಲ. ಸಂವಿಧಾನದ ಪ್ರಕಾರ ಎಲ್ಲರನ್ನೂ ಸಮಾನವಾಗಿ ನಡೆದುಕೊಳ್ಳುತ್ತೇವೆ. ಏನಾದ್ರೂ ಆರೋಪ ಇದ್ದಲ್ಲಿ ಮಾತ್ರ ತನಿಖೆ, ವಿಚಾರಣೆ ನಡೆಸುತ್ತೇವೆ. ಅದು ಬಿಟ್ಟರೆ ಯಾವುದೇ ಟಾರ್ಗೆಟ್ ಮಾಡಿದ ಉದಾಹರಣೆ ಇಲ್ಲ. ಅನ್ವರ್ ಮಾಣಿಪ್ಪಾಡಿಯವರು ನನ್ನ ಸ್ನೇಹಿತರು. ಯಾವ ವಿಚಾರದಲ್ಲಿ ಭಿನ್ನಮತ ಇದೆ ಎನ್ನುವ ಬಗ್ಗೆ ಅವರನ್ನೇ ಕೇಳಿ ಮಾತನಾಡುತ್ತೇನೆ ಎಂದು ಹೇಳಿದರು.

ವಕ್ಫ್ ಆಸ್ತಿ ಕಬಳಿಕೆ ವರದಿ ಬಗ್ಗೆ ಕೇಳಿದ್ದಕ್ಕೆ, ಅದು ನಮ್ಮ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ಸರಕಾರದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಸೈಬರ್ ಕ್ರೈಮ್ ಅಪರಾಧ ಪತ್ತೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ, ಸೈಬರ್ ಅಪರಾಧಗಳ ಪತ್ತೆಗಾಗಿ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತ್ಯೇಕ ತಂಡ ಮಾಡಿದ್ದೇವೆ. ಅವರು ನಿಗಾ ಇಟ್ಟಿದ್ದಾರೆ. ಎಲ್ಲವನ್ನೂ ಪತ್ತೆ ಮಾಡಲಾಗುವುದು, ಸೈಬರ್ ಅಪರಾಧಗಳ ಪತ್ತೆಗೆ ಸಮಯ ಬೇಕಾಗುತ್ತದೆ ಎಂದು ಹೇಳಿದರು.
State home minister Araga Jnanendra has said that he has ordered for a survey of foreign nationals living in Mangaluru and Dakshina Kannada police station limits. Also satellite phone activate in different parts of Mangaluru has been taken seriously by our police officers he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm