ಬ್ರೇಕಿಂಗ್ ನ್ಯೂಸ್
30-06-22 11:44 am Mangaluru Correspondent ಕರಾವಳಿ
ಮಂಗಳೂರು, ಜೂನ್ 30: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರ, ಪಡೀಲ್, ಕೋಡಿಕಲ್, ಮಾಲೆಮಾರ್ ನಲ್ಲಿ ನೀರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದ್ದು ವಾಹನ ಸವಾರರು ನೀರಿನಲ್ಲಿ ತೇಲಾಡುವ ಸ್ಥಿತಿ ಉಂಟಾಗಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್, ಪಡೀಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ಪಡೀಲ್, ಕಣ್ಣೂರು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆನೀರು ಹೆದ್ದಾರಿಯಲ್ಲಿ ನಿಂತಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ.
ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗಿದ್ದು ಪೂರ್ತಿ ಮಳೆ ನೀರಿನಲ್ಲಿ ಜಲಾವೃತ ಆಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ಮಂಗಳೂರಿನ ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಬೆಳ್ಳಂಬೆಳಗ್ಗೆ ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿದ್ದಾರೆ. ಮಾಲೆಮಾರ್, ಕೊಟ್ಟಾರದಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುತ್ತದೆ. ಹೆದ್ದಾರಿಯಲ್ಲಿ ನೀರು ಹರಿಯುವುದು ಸಾಮಾನ್ಯ ಅನ್ನುವಂತಾಗಿದೆ.
ಹವಾಮಾನ ಇಲಾಖೆಯಿಂದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 26ರಿಂದ 30 ರ ವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿತ್ತು. ಈಗ ಎರಡು ದಿನಗಳಿಂದ ಭಾರೀ ಮಳೆ ಆಗತೊಡಗಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜು, ಪಿಯು ಮತ್ತು ಡಿಗ್ರಿ ಕಾಲೇಜಿಗೆ ರಜೆ ನೀಡಿದೆ. ಮಂಗಳೂರು ನಗರದಲ್ಲಿ ಈಗಾಗಲೇ ಶಾಲೆ ಶುರುವಾಗಿದ್ದಲ್ಲಿ ರಜೆ ಕೊಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಳೀಯ ಶಿಕ್ಷಣಾಧಿಕಾರಿ, ತಹಸೀಲ್ದಾರ್ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
Heavy rains have been lashing in the district of Dakshina Kannada for the past two days including the city of Mangaluru. Some private educational institutions have declared holiday on Thursday, June 30. The route from Adyar to Kannur in city was blocked due to water-logging and people were seen pushing their two-wheeler through the submerged roads. Water also gushed into premises of a private hospital in Kannur. The road from Mangaluru to Moodbidri is completely submerged in water causing a traffic jam. The commuters were having a time moving past the national highway near Kulshekar. Traffic was completely disrupted from Kudupu to Shakthinagar and people were found stranded for more than an hour, when reports last came in. Rain fury has been reported from Kottara Chowki and several other localities in the city.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm