ಬ್ರೇಕಿಂಗ್ ನ್ಯೂಸ್
07-07-22 09:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 7 : ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು ಹೀಗಾಗಿ ಎರಡೂ ಜಿಲ್ಲೆಗಳಲ್ಲಿ ಜುಲೈ 8 ಮತ್ತು 9 ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 9ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ಅಲ್ಲದೆ, 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಅವಧಿಯಲ್ಲಿ ಜನರು ಮುಂಜಾಗ್ರತೆ ವಹಿಸಬೇಕು ಎಂದೂ ಹವಾಮಾನ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.
ಇದೇ ಎಚ್ಚರಿಕೆಯನ್ನು ಪರಿಗಣಿಸಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಶಾಲೆ, ಕಾಲೇಜಿಗೆ ರಜೆಯನ್ನೂ ಎರಡು ದಿನಕ್ಕೆ ಘೋಷಣೆ ಮಾಡಿವೆ. ಈಗಾಗಲೇ ಕಳೆದ ಮೂರು ದಿನಗಳಿಂದ ಮಳೆಯ ಕಾರಣಕ್ಕೆ ಎರಡೂ ಜಿಲ್ಲೆಗಳಲ್ಲಿ ರಜೆ ನೀಡಲಾಗಿತ್ತು. ಈಗ ಇನ್ನೂ ಎರಡು ದಿನಕ್ಕೆ ರಜೆಯನ್ನು ವಿಸ್ತರಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಳೆಯ ಕಾರಣ ಒಂದು ವಾರ ಕಾಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಿರುವ ದಾಖಲೆಯೂ ಸೇರಿದೆ.
ಈ ಹಿಂದೆಯೂ ಮಳೆಗಾಲದಲ್ಲಿ ಕೆಲವೊಮ್ಮೆ ವಿಪರೀತ ಮಳೆ ಬಿದ್ದ ದಿವಸ ರಜೆ ನೀಡಿದ್ದುಂಟು. ಆದರೆ ಒಂದೇ ಬಾರಿಗೆ ನಿರಂತರ ವಾರ ಪೂರ್ತಿ ರಜೆ ಸಾರಿದ್ದು ಕಡಿಮೆ. ಈ ಬಾರಿಯ ಮಳೆಗಾಲ ಇಪ್ಪತ್ತು ವರ್ಷಗಳ ಇತಿಹಾಸದಲ್ಲಿ ಅಪರೂಪದ ಎನ್ನುವಂತಹ ದಾಖಲೆ ಸೇರಿದೆ. ಆರ್ದ್ರಾ ನಕ್ಷತ್ರದಲ್ಲಿ ಕಳೆದ ಹತ್ತು ವರ್ಷದಲ್ಲಿ ಮಳೆ ಕಡಿಮೆಯಾಗಿರುತ್ತಿತ್ತು. ಈ ಬಾರಿಯೇ ಆರ್ದ್ರಾ ಮಳೆ ರೌದ್ರಾವತಾರ ತೋರಿದೆ.
As a red alert is issued by the India Meteorological Department for the Dakshina Kannada (DK) and Udupi districts on July 8 and 9, Dakshina Kannada (DK) deputy commissioner (DC) Dr K V Rajendra and Udupi DC Kurma Rao M declared a holiday on July 8 and 9 for all the educational institutions.It may be recalled, a holiday was declared on July 5, 6 and 7 also as heavy rains lashed the twin districts. All the anganwadis, private and government schools, colleges and degree colleges will remain close on July 8 and 9 in Dakshina Kannada and Udupi.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm