ಬ್ರೇಕಿಂಗ್ ನ್ಯೂಸ್
22-07-22 01:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಬಳಿಕ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ತೆರಳಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಜಾಥಾ ಹೋಗಲು ಪೊಲೀಸರ ಪೂರ್ವಾನುಮತಿ ಪಡೆಯದ ಕಾರಣ ನಿರಾಕರಣೆ ಮಾಡಲಾಗಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಬ್ಯಾರಿಕೇಡ್ ಹಾಕಿ, ಅಡ್ಡ ನಿಂತಿದ್ದರು. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ಮೆರವಣಿಗೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಇಡಿ, ಸಿಬಿಐ, ಐಟಿಯಂತಹ ಏಜನ್ಸಿಗಳನ್ನು ಬಳಸಿಕೊಳ್ಳುತ್ತಿವೆ. ಈ ರೀತಿಯ ಸೇಡಿನ ರಾಜಕಾರಣಕ್ಕೆ ಜನರು ಹೆಚ್ಚು ಕಾಲ ಅವಕಾಶ ಕೊಡುವುದಿಲ್ಲ. ಸದ್ಯದಲ್ಲೇ ಕೊನೆ ಬೀಳಲಿದೆ ಎಂದರು.
ಬಳಿಕ ಪೊಲೀಸರ ಜೊತೆ ತಳ್ಳಾಟ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಬಸ್ಸಿಗೆ ಹತ್ತಿಸಿದರು. ಕೆಲಹೊತ್ತು ಜಟಾಪಟಿ ನಡೆದಿದ್ದು ಪೊಲೀಸರು ಬಳಿಕ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಕವಿತಾ ಸನಿಲ್, ಮಿಥುನ್ ರೈ, ಐವನ್ ಡಿಸೋಜ, ಮೊಯ್ದೀನ್ ಬಾವ ಪೊಲೀಸ್ ಬ್ಯಾರಿಕೇಡ್ ತಳ್ಳಿಕೊಂಡು ಕೆಲಕಾಲ ಹೈಡ್ರಾಮಾ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಧು ಬಂಗಾರಪ್ಪ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ED quizzes Sonia Gandhi for 2 hours in National Herald case congress members protest in Mangalore fight with police. Amid protests by party workers in the capital and other parts of the country, ED officials questioned Congress chief Sonia Gandhi for two hours on Thursday in connection with a money laundering case, better known as the National Herald case.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm