ಬ್ರೇಕಿಂಗ್ ನ್ಯೂಸ್
05-08-22 06:56 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 5: ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ವತಿಯಿಂದ ಈ ಬಾರಿಯೂ ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಆಗಸ್ಟ್ 6ರಂದು ಕೊಡಿಯಾಲಬೈಲಿನ ಬಿಷಪ್ ಹೌಸ್ ನಲ್ಲಿ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಒಟ್ಟು 17.50 ಲಕ್ಷ ರೂಪಾಯಿ ನಿಧಿಯನ್ನು ಬಡ ವರ್ಗದ ವಿದ್ಯಾರ್ಥಿಗಳಿಗೆ ನೀಡಲು ನಿರ್ಧರಿಸಲಾಗಿದೆ.
2022-23ರ ಸಾಲಿನಲ್ಲಿ ಮೂರು ವಿಭಾಗದಲ್ಲಿ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ. ಉದ್ಯಮಿಗಳು ದಾನ ರೂಪದಲ್ಲಿ ಕೊಡಮಾಡುವ ದತ್ತಿ ನಿಧಿ ವಿದ್ಯಾರ್ಥಿವೇತನ, ಕೋವಿಡ್ ಕಾರಣದಿಂದ ಹೆತ್ತವರನ್ನು ಕಳಕೊಂಡ ವಿದ್ಯಾರ್ಥಿಗಳಿಗೆ ಮತ್ತು ವಾರ್ಷಿಕವಾಗಿ ನೀಡುವಂತೆ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನ ಕೊಡುವುದಕ್ಕೆ ಯಾವುದೇ ಅರ್ಹತೆ ಅಥವಾ ಮಾರ್ಕು ಮಾನದಂಡವಲ್ಲ.

ವಿದ್ಯಾರ್ಥಿಗಳ ಕುಟುಂಬದ ಸ್ಥಿತಿಗತಿ, ಹೆತ್ತವರು ರೋಗಕ್ಕೆ ತುತ್ತಾಗಿದ್ದವರು, ಒಬ್ಬರೇ ಹೆತ್ತವರು ಇರುವುದು, ಕೂಲಿ ಕಾರ್ಮಿಕರಾಗಿರುವುದು, ಗಂಭೀರ ಕಾಯಿಲೆಯಿಂದ ಬಳಲುತ್ತಿರುವುದನ್ನು ಪರಿಗಣಿಸಿ ಯಾವುದೇ ಜಾತಿ, ಭೇದ ಇಲ್ಲದೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿ ವೇತನ ನೀಡಲಾಗುವುದು. ಇದರ ಜೊತೆಗೆ ಬಡ ವರ್ಗದ ವಿದ್ಯಾರ್ಥಿಗಳಿಗೆ ಪುಸ್ತಕ ಇನ್ನಿತರ ಕಲಿಕಾ ಸಾಮಗ್ರಿಗಳನ್ನೂ ನೀಡಲಾಗುತ್ತಿದೆ. 2021-22ರ ಸಾಲಿನಲ್ಲಿ 250ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಈ ಪೈಕಿ 111 ವಿದ್ಯಾರ್ಥಿಗಳಿಗೆ ತಲಾ 11,500 ರೂ.ನಂತೆ ಒಟ್ಟು 11.20 ಲಕ್ಷ ರೂಪಾಯಿ ನೀಡಲಾಗಿತ್ತು.
ಕಳೆದ ಬಾರಿ ಕೋವಿಡ್ ಕಾರಣದಿಂದ ಹೆತ್ತವರನ್ನು ಕಳಕೊಂಡ ವಿದ್ಯಾರ್ಥಿಗಳ ಬಗ್ಗೆ ಚಿಕ್ಕಮಗಳೂರು, ಉಡುಪಿ ಮತ್ತು ಮಂಗಳೂರಿನಲ್ಲಿ ಸರ್ವೆ ನಡೆಸಿದ್ದು, 34 ಮಂದಿಗೆ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಲಾಗಿತ್ತು. ಈ ಬಾರಿ ಕೋವಿಡ್ ವಿಭಾಗದಲ್ಲಿ 30 ವಿದ್ಯಾರ್ಥಿಗಳನ್ನು ಪರಿಗಣಿಸಿದ್ದು 6.30 ಲಕ್ಷ ರೂ. ನೀಡಲಾಗುತ್ತಿದೆ. ಬಿಷಪ್ ಹೌಸ್ ನಲ್ಲಿ ಶನಿವಾರ(ಆಗಸ್ಟ್ 6) ನಡೆಯುವ ಕಾರ್ಯಕ್ರಮದಲ್ಲಿ ದಾನಿಗಳ ಸಮ್ಮುಖದಲ್ಲಿ ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಅವರು ವಿದ್ಯಾರ್ಥಿಗಳಿಗೆ ದತ್ತಿ ನಿಧಿಗಳನ್ನು ನೀಡಲಿದ್ದಾರೆ ಎಂದು ಸೌತ್ ಕೆನರಾ ಅಸೋಸಿಯೇಶನ್ ಅಧ್ಯಕ್ಷ ವಿನ್ಸೆಂಟ್ ಪಾಯಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bishop of Mangaluru Diocese Rev Dr Peter Paul Saldanha to Distributes Cheques from Catholic Association of South Kanara to Deserving Students worth 17.5 lakhs in and around Mangaluru pursuing their studies in Nursing, B Ed, Engineering, College graduation, Post Graduation, and even Primary Schooling-IRRESPECTIVE OF CASTE OR CREED on August 6th at Bishop house at Kodialbail.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm