ಬ್ರೇಕಿಂಗ್ ನ್ಯೂಸ್
04-10-20 05:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 4: ಗಾಂಜಾ ಮತ್ತಿನಲ್ಲಿ ಮನೆಗೆ ನುಗ್ಗಿದ ಯುವಕರ ತಂಡ ಮನೆಮಂದಿಗೆ ತಲವಾರು ತೋರಿಸಿ, ಬೆದರಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ.
ಪಚ್ಚನಾಡಿಯಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಫ್ರಾನ್ಸಿಸ್ ಎಂಬವರ ಮನೆಗೆ ನುಗ್ಗಿ ತಂಡವೊಂದು ದಾಂಧಲೆ ನಡೆಸಿದೆ. ನಿತಿನ್ ಮತ್ತು ಮಹೇಶ್ ಎಂಬವರ ತಂಡ ತಲವಾರು ಹಿಡಿದು ದಾಂಧಲೆ ನಡೆಸಿರುವ ಘಟನೆ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ನಿತಿನ್ ಎಂಬಾತ ಸ್ಥಳೀಯ ರೌಡಿಶೀಟರ್ ಆಗಿದ್ದು ಗಾಂಜಾ ಮತ್ತಿನಲ್ಲಿ ಪರಿಸರದಲ್ಲಿ ರೌಡಿಸಂ ನಡೆಸುತ್ತಿದ್ದಾನೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ರಾತ್ರಿ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸುತ್ತಾನೆ. ನಿನ್ನೆ ರಾತ್ರಿ ಫ್ರಾನ್ಸಿಸ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಆತನ ತಾಯಿಗೆ ತೀವ್ರ ಹಲ್ಲೆ ನಡೆಸಿದ್ದಾರೆ. ತಲವಾರು ಕಾಳಗದಲ್ಲಿ ಕಾರ್ತಿಕ್ ಎಂಬಾತನ ಕಾಲಿಗೆ ಕಡಿದಿದ್ದಾರೆ. ವಿಡಿಯೋದಲ್ಲಿ ತಲವಾರು ಹಿಡಿದು ತಳ್ಳಾಡುತ್ತಿರುವ ವಿಡಿಯೋ ಸೆರೆಯಾಗಿದೆ. ಪಚ್ಚನಾಡಿಯಲ್ಲಿ ಗಾಂಜಾ ವ್ಯಸನಿಗಳ ಗುಂಪು ಪ್ರತಿ ದಿನವೂ ರಾತ್ರಿ ವೇಳೆ ಸ್ಥಳೀಯರನ್ನು ತಲವಾರು ತೋರಿಸಿ ಬೆದರಿಸುತ್ತಿದೆ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಭಾಗದಲ್ಲಿ ಗಾಂಜಾ ವ್ಯಸನಿಗಳು ಹೆಚ್ಚುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ಪಚ್ಚನಾಡಿ, ಬಂದಲೆ ಪರಿಸರ ಅತ್ತ ಕಾವೂರು ಠಾಣೆ ಮತ್ತು ಕಂಕನಾಡಿ ಗ್ರಾಮಾಂತರ ವಾಮಂಜೂರು ಠಾಣೆಯ ನಡುವಲ್ಲಿ ಬರುತ್ತದೆ. ಹೀಗಾಗಿ ಪೊಲೀಸರು ಇಲ್ಲಿಗೆ ರೌಂಡ್ಸ್ ಬರುವುದಿಲ್ಲ. ಇದರಿಂದಾಗಿ ಪುಂಡು ಪೋಕರಿಗಳ ಕಾಟ ಹೆಚ್ಚಾಗಿದೆ ಎನ್ನುತ್ತಿದ್ದಾರೆ ಸ್ಥಳೀಯರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm