ಬ್ರೇಕಿಂಗ್ ನ್ಯೂಸ್
27-08-22 01:20 pm Mangalore Correspondent ಕರಾವಳಿ
ಉಳ್ಳಾಲ, ಆ.27: ಶ್ರಾವಣ ಅಮವಾಸ್ಯೆ ಪ್ರಯುಕ್ತ ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ಕಡಲಲ್ಲಿ ಸಹಸ್ರಾರು ಮಂದಿ ಭಕ್ತರು ಪವಿತ್ರ ತೀರ್ಥ ಸ್ನಾನ ಮಾಡಿ ಪುನೀತರಾದರು.
ಸೋಮೇಶ್ವರದ ಸೋಮನಾಥ ದೇವಸ್ಥಾನದ ಸಾಂಪ್ರದಾಯಿಕ ಉತ್ಸವಗಳಲ್ಲಿ ಶ್ರಾವಣ ಅಮವಾಸ್ಯೆಯ ಪವಿತ್ರ ಸಮುದ್ರ ತೀರ್ಥ ಸ್ನಾನವು ಪ್ರಾಮುಖ್ಯತೆ ಪಡೆದಿದೆ. ಮಳೆಗಾಲದಲ್ಲಿ ಪ್ರಕ್ಷುಬ್ಧಗೊಳ್ಳುವ ಕಡಲು ಶ್ರಾವಣ ಮಾಸದಲ್ಲಿ ಶಾಂತವಾಗುವುದರ ಜೊತೆಗೆ ಕಡಲ ನೀರಲ್ಲಿ ಔಷಧೀಯ ಗುಣದ ಲವಣಾಂಶಗಳು ಸಮೃದ್ಧಿಗೊಂಡಿರುತ್ತದೆ. ಈ ನೀರಲ್ಲಿ ಸ್ನಾನ ಮಾಡಿದರೆ ಚರ್ಮ ವ್ಯಾಧಿ ಮಾತ್ರವಲ್ಲದೆ ಇನ್ನಿತರ ಕಾಯಿಲೆಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ.



ಭಕ್ತರು ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರದ ಸಮುದ್ರದಲ್ಲಿ ಪವಿತ್ರ ತೀರ್ಥ ಸ್ನಾನವೆಂಬ ಧಾರ್ಮಿಕ ನಂಬಿಕೆ ಮತ್ತು ವೈಜ್ಞಾನಿಕ ಅರಿವಿನಿಂದ ಸ್ನಾನ ಮಾಡಿ ಪುನೀತರಾಗುತ್ತಾರೆ. ಭಕ್ತರು ವೀಳ್ಯ, ತೆಂಗಿನ ಕಾಯಿಯನ್ನು ಸಮುದ್ರರಾಜನಿಗೆ ಅರ್ಪಿಸಿ ನಂತರ ಸಮುದ್ರ ಸ್ನಾನ ಮಾಡಿ ಕಡ್ಡಾಯವಲ್ಲದಿದ್ದರೂ ಸಮೀಪದ ಗದಾ ತೀರ್ಥ ಕೆರೆಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ತೆರಳುತ್ತಾರೆ. ಸಮುದ್ರದಲ್ಲಿ ತೀರ್ಥ ಸ್ನಾನ ಮಾಡುವ ಸಂದರ್ಭ ಯಾವುದೇ ಅನಾಹುತಗಳು ನಡೆಯದಂತೆ ನುರಿತ ಜೀವರಕ್ಷಕ ಸಿಬ್ಬಂದಿಗಳು ಕಣ್ಗಾವಲು ಇಟ್ಟಿದ್ದರು. ದೇವಸ್ಥಾನಕ್ಕೆ ತೆರಳಿದ ಭಕ್ತರು ಸೋಮನಾಥನಿಗೆ ಪ್ರಿಯವಾದ ಸೇವೆಗಳನ್ನ ಸಲ್ಲಿಸಿ ಕೃತಾರ್ಥರಾದರು.


ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರ ಕ್ಷೇತ್ರದಲ್ಲಿ ಗೃಹ ಮತ್ತು ಕೃಷಿ ಬಳಕೆಯ ವಿವಿಧ ರೀತಿಯ ಕತ್ತಿಗಳ ವ್ಯಾಪಾರ ಜೋರಾಗಿರುತ್ತದೆ. ಕೃಷಿ ಚಟುವಟಿಕೆ ಆರಂಭದ ಸಮಯವಾದುದರಿಂದ ಸಹಸ್ರಾರು ಮಂದಿ ಸೇರುವ ತೀರ್ಥ ಸ್ನಾನದ ಸಂಧರ್ಭದಲ್ಲಿ ಹಿಂದಿನಿಂದಲೂ ಇಲ್ಲಿ ಕತ್ತಿ ಮಾರಾಟದ ಸಂಪ್ರದಾಯ ಬೆಳೆದುಬಂದಿದೆ. ವಾರದ ಕೊನೆಯ ಶನಿವಾರ ಅಮವಾಸ್ಯೆ ಬಂದ ಕಾರಣ ಸೋಮೇಶ್ವರದಲ್ಲಿ ತೀರ್ಥ ಸ್ನಾನ ಮಾಡಲು ಭಕ್ತರ ದಂಡು ಕೊಂಚ ವಿರಳವಾಗಿತ್ತು.
Thousands of people from the city and far off places undertook journey to Lord Somanatha Temple at Someshwara, Ullal here, on the holy occasion of Shravana Amavasya on Sunday September 13.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am