ಬ್ರೇಕಿಂಗ್ ನ್ಯೂಸ್
06-10-20 08:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 6: ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೋವಿಡ್ 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯದ ವೇಳೆಗೆ ತಿರುಗಾಟಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕೆಲಸಗಾರರಿದ್ದಾರೆ. ಈ ಬಾರಿ ಕೊರೊನಾದಿಂದಾಗಿ ಯಕ್ಷಗಾನ ನಡೆಯದೆ ಕಲಾವಿದರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮತ್ತೆ ತಿರುಗಾಟಕ್ಕೆ ಸಮಯ ಬಂದರೂ, ಸರಕಾರದ ಕಡೆಯಿಂದ ಸೂಚನೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಅವಕಾಶ ನೀಡಬೇಕೆಂದು ಮುಜರಾಯಿ ಸಚಿವರಿಗೆ ಕಲಾವಿದರು ಮತ್ತು ಮೇಳದ ವ್ಯವಸ್ಥಾಪಕರು ಸೇರಿ ಮನವಿ ಸಲ್ಲಿಸಿದ್ದರು.

ಕಲಾವಿದರ ಪರವಾಗಿ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯ ಕಲಾವಿದ ಸೀತಾರಾಮ್ ಕುಮಾರ್ ಸೇರಿದಂತೆ ಕಲಾವಿದರು ಮತ್ತು ಮೇಳದ ಪ್ರಮುಖರು ಸಚಿವರನ್ನು ಭೇಟಿಯಾಗಿದ್ದರು. ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರ ಆಗಲಿದೆ. ಈಗಾಗಲೇ ಕೋವಿಡ್ ಕಾರಣದಿಂದ ನೊಂದ ಕಲಾವಿದರ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ವಿವರಿಸಿದರು.
ಈಗಿರುವ ಮೇಳಗಳಲ್ಲಿ ಯಾವುದೇ ಆದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸ ಬೇಕೆಂಬ ಮನವಿ ಸಭೆಯಲ್ಲಿ ಕೇಳಿಬಂತು.
ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm