ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್‌ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm