ಬ್ರೇಕಿಂಗ್ ನ್ಯೂಸ್
08-10-20 05:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 08: ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಯೋಜನಾ ವೆಚ್ಚವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಯೋಜನೆಯಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಮಾಜಿ ಎಂಎಲ್ಸಿ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಎರಡು ವರ್ಷ ಕಳೆದರೂ ಸಮರ್ಪಕವಾಗಿ ನಡೆದಿಲ್ಲ. ಯೋಜನೆಯ ವೆಚ್ಚಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದ್ದು ಭಾರೀ ಅವ್ಯವಹಾರ ನಡೆದಿರುವ ಶಂಕೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ವಿಂಗಡಿಸಿ ನೀಡಲಾಗುತ್ತಿದೆ. ಮೂಡಾ ವ್ಯಾಪ್ತಿಯ ಎಂಟು ಕೆರೆಗಳ ಅಭಿವೃದ್ಧಿಗೆ ಎಂಟು ಕೋಟಿ ರೂ. ಮಂಜೂರಾಗಿ ಎಂಟು ತಿಂಗಳು ಕಳೆದರೂ ಕಾಮಗಾರಿ ಆರಂಭಿಸಿಲ್ಲ. ಯೋಜನೆಯ ವೆಚ್ಚಗಳ ಬಗ್ಗೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿಗೆ ವಿಧಿಸುವಂತಿಲ್ಲ. ಸರಕಾರದ ಅನುದಾನ ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಇಡೀ ಯೋಜನೆಯನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.


ಪ್ರಧಾನ ಮಂತ್ರಿ ಇಂದಿರಾ ಅವಾಝ್ ಯೋಜನೆಯ ಫಲಾನುಭವಿಗಳಿಗೆ ಎರಡು ವರ್ಷ 9 ತಿಂಗಳು ಕಳೆದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಅಧಿಕಾರಿಗಳು, ಶಾಸಕರೂ ಮುತುರ್ಜಿ ವಹಿಸುತ್ತಿಲ್ಲ. ಇದರಿಂದ ಮನೆ ಮಂಜೂರಾದ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಫಲಾನುಭವಿಗಳಿಗೆ ಮನೆ ಒದಗಿಸಿಕೊಡಬೇಕೆಂದು ಐವನ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Former MLC Ivan D'souza alleges scam in Mangalore Smart city project, says will report to Lokayukta tpo investigate the case
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm