ಬ್ರೇಕಿಂಗ್ ನ್ಯೂಸ್
24-09-22 12:48 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಪೇ ಸಿಂ ಅಭಿಯಾನ ಕರಾವಳಿಗೂ ಕಾಲಿಟ್ಟಿದೆ. ಬೆಳ್ತಂಗಡಿ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣ, ಆಸುಪಾಸಿನ ಸಾರ್ವಜನಿಕ ಪ್ರದೇಶದಲ್ಲಿ ಮುಖ್ಯಮಂತ್ರಿ ಚಿತ್ರವುಳ್ಳ ಪೇ ಸಿಂ ಸ್ಟಿಕ್ಕರ್ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಸಾರ್ವಜನಿಕ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ಟಿಕ್ಕರ್ ಅಂಟಿಸಿದ್ದಾರೆ. ಸಾರಿಗೆ ಬಸ್, ಬಸ್ ಸ್ಟ್ಯಾಂಡ್, ಅಂಗಡಿಗಳ ಗೋಡೆಗಳ ಮೇಲೆ ಸ್ಟಿಕ್ಕರ್ ಅಂಟಿಸಲಾಗಿದೆ. ಪೇ ಸಿಂ ಸ್ಟಿಕ್ಕರ್ ಜೊತೆ ಪೇ ಎಂ ಎಲ್ ಎ ಸ್ಟಿಕ್ಕರ್ ಕೂಡ ಜೊತೆಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಅಣಕಿಸಲಾಗಿದೆ.




ಇದೇ ವೇಳೆ, ಸೋಷಿಯಲ್ ಮೀಡಿಯಾದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೇ ಸ್ಟಿಕ್ಕರ್ ಹರಿದಾಡುತ್ತಿದೆ. ಬೆಂಗಳೂರು ನಗರದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಟಿಕ್ಕರ್, ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿತ್ತು. ಇದೇ ವಿಚಾರದಲ್ಲಿ ವಿಧಾನಸಭೆ ಅಧಿವೇಶನದಲ್ಲಿಯೂ ಜಟಾಪಟಿ ನಡೆದಿತ್ತು. ಬೆಂಗಳೂರಿನಲ್ಲಿ ಸ್ಟಿಕ್ಕರ್ ಅಂಟಿಸಿದ್ದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ, ಐದು ಮಂದಿಯನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಕರ್ತರ ಜೊತೆ ಸೇರಿ ನಾನೂ ಸ್ಟಿಕ್ಕರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ ಎಂದು ಸವಾಲು ಹಾಕಿದ್ದರು. ರಾಜ್ಯದೆಲ್ಲೆಡೆ ಸ್ಟಿಕ್ಕರ್ ಅಭಿಯಾನ ನಡೆಸುವ ಸುಳಿವನ್ನೂ ನೀಡಿದ್ದರು.
PayCM photos, 40 percent Sarkara camping now starts in Belthangady, Mangalore with CM Bommai likeness. Posters targeting Karnataka chief minister Basavaraj Bommai - with his likeness pasted over the image of a QR code and the phrase 'PayCM' written above - were spotted across Bengaluru recently.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm