ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm