ಬ್ರೇಕಿಂಗ್ ನ್ಯೂಸ್
28-09-22 03:45 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್ ಪಕ್ಕದಲ್ಲಿ ಸ್ಥಳೀಯ ಮಹಿಳೆಯೊಬ್ಬರ ಭಾವಚಿತ್ರ ಇರುವ ಫ್ಲೆಕ್ಸ್ ಅಳವಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಆಯೋಜಕರು ತಕ್ಷಣ ವಿವಾದಿತ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಕೊಲ್ಯದ ನಾರಾಯಣ ಗುರು ಸಭಾಂಗಣದಲ್ಲಿ ಅನ್ನಪ್ರಾಶನ, ಪೌಷ್ಟಿಕ ಆಹಾರ, ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನ ಬುಧವಾರ ಏರ್ಪಡಿಸಲಾಗಿತ್ತು.


ಕಾರ್ಯಕ್ರಮದ ಪ್ರಚಾರಾರ್ಥ ಸಭಾಂಗಣದ ಹೊರಗಡೆ ಹಾಕಿರುವ ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರಗಳನ್ನ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸಲ್ಲಿ ಸ್ಥಳೀಯ ಹಿಂದೂ ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ವೇಳೆ ತೆಗೆಸಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸೀಮಂತ ಕಾರ್ಯಕ್ರಮದ ಸಭಾಂಗಣಕ್ಕೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಹಿಂದು ವಿರೋಧಿ ಖಾದರ್ ಎಂದು ಧಿಕ್ಕಾರ ಕೂಗಿದ್ದಾರೆ. ಹಿಂದು ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಕಾರ್ಯಕ್ರಮದ ಆಯೋಜಕರು ಕೂಡಲೇ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.


ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು ಮಾತನಾಡಿ ತಾಯಂದಿರಿಗೆ ಸ್ಥೈರ್ಯ ನೀಡುವ ಕಾರ್ಯಕ್ರಮ ಎಂದು ಹೇಳಿಕೊಂಡು ಅನುಮತಿ ಇಲ್ಲದೆ ಯಾವುದೋ ಹಿಂದೂ ಹುಡುಗಿಯ ಫೋಟೊವನ್ನ ಸಾರ್ವಜನಿಕವಾಗಿ ಫ್ಲೆಕ್ಸ್ ಹಾಕಿ ಆಕೆ ಮುಜುಗರ ಪಡುವಂತೆ ಮಾಡಿದನ್ನ ಬಜರಂಗದಳ ಖಂಡಿಸುತ್ತಿದ್ದು ಕಾರ್ಯಕ್ರಮ ಆಯೋಜಕರ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡುವುದಾಗಿ ಹೇಳಿದರು.ಆಯೋಜಕರು ಮಾಡಿದ ಎಡವಟ್ಟಿನಿಂದ ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಗೊಂದಲ ನಡೆಯುವಂತಾಯಿತು.
Mangalore, Pregnant photo of woman used on government banner at Ullal without permission along with MLA UT Khader sparks controversy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm