ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm