ಬ್ರೇಕಿಂಗ್ ನ್ಯೂಸ್
30-09-22 02:18 pm Mangalore Correspondent ಕರಾವಳಿ
ಮಂಗಳೂರು, ಸೆ.30 : ಲೋಕಾಯುಕ್ತಕ್ಕೆ ಇತ್ತೀಚೆಗೆ ಫುಲ್ ಪವರ್ ಸಿಕ್ಕ ಬಳಿಕ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಮೊದಲ ಬಾರಿಗೆ ಭ್ರಷ್ಟರ ಮೇಲೆ ದಾಳಿ ನಡೆಸಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ಬಲೆಗೆ ಕೆಡವಿದ್ದಾರೆ.
ಶಿವಾನಂದ ನಾಟೇಕರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಜಾಗದ ಮಾರಾಟ ಸಲುವಾಗಿ ಎನ್ಓಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕೊನೆಗೆ, ಐದು ಸಾವಿರ ನೀಡುವುದಾಗಿ ಹೇಳಿ ಒಪ್ಪಂದ ಆಗಿತ್ತು. ಅಧಿಕಾರಿಗಳ ಸೂಚನೆಯಂತೆ, ಶುಕ್ರವಾರ ಮಧ್ಯಾಹ್ನ 4700 ರೂಪಾಯಿ ಲಂಚ ನೀಡುತ್ತಿದ್ದಾಗಲೇ ಲೋಕಾಯುಕ್ತ ದಾಳಿ ನಡೆಸಿದ್ದರು.
ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗು ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ ನಾಟೇಕರ್ ಈ ಹಿಂದೆ ಕಾವೂರಿನಲ್ಲಿ ವಿಎ ಆಗಿದ್ದು ಅಲ್ಲಿಯೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತಾಗಿದ್ದ. ಇತ್ತೀಚೆಗಷ್ಟೇ ಮಂಗಳೂರು ತಾಲೂಕು ಕಚೇರಿಗೆ ನಿಯೋಜನೆಗೊಂಡಿದ್ದ ಎನ್ನಲಾಗಿದೆ.
Lokyuktha raids on Mini Vidhana Soudha in Mangalore, assistant Tahsildar caught red hand
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm