ಬ್ರೇಕಿಂಗ್ ನ್ಯೂಸ್
09-10-22 06:21 pm Mangalore Correspondent ಕರಾವಳಿ
ಉಳ್ಳಾಲ, ಅ.9 : ಕಳೆದ ಸೆ.26 ರಂದು ಉಳ್ಳಾಲದ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ಪತ್ತೆಯಾಗಿತ್ತು. ಮೂರು ದಿವಸಗಳ ಬಳಿಕ ಶವದ ಗುರುತು ಪತ್ತೆಯಾಗದೆ ಕೋಸ್ಟ್ ಗಾರ್ಡ್ ಪೊಲೀಸರು ಮೃತದೇಹವನ್ನ ಹೂತು ದಫನ ಮಾಡಿದ್ದರು. ಇದೀಗ ಕುಟುಂಬಸ್ಥರು ಉಳ್ಳಾಲ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ ಶವದ ಗುರುತು ಪತ್ತೆಯಾಗಿದ್ದು ತನಿಖೆ ಆರಂಭಗೊಂಡಿದೆ.
ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36)ಯಾನೆ ಜಾಕಿ ಮೃತ ವ್ಯಕ್ತಿ. ಝಾಕಿರ್ ವಿವಾಹಿತನಾಗಿದ್ದು ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದರರ ಜೊತೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ವ್ಯವಹಾರದಲ್ಲಿ ಕೈ ಸುಟ್ಟು ಕೊಂಡಿದ್ದನೆನ್ನಲಾಗಿದೆ. ಝಾಕಿರ್ ಇತ್ತೀಚೆಗೆ ಖಿನ್ನತೆಗೊಳಗಾಗಿದ್ದು ಕಳೆದ ಸೆ.26 ರಂದು ಮನೆಯಿಂದ ಹೊರ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ. ಝಾಕಿರ್ ಚಲಾಯಿಸುತ್ತಿದ್ದ ಮೋಟಾರ್ ಬೈಕ್ ಮೊನ್ನೆ ಶುಕ್ರವಾರ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸುವಾಗ ಝಾಕಿರ್ ಮೃತದೇಹ ಕುಂಬ್ಳೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.


ಕಳೆದ ಸೆ.28 ರಂದು ಕುಂಬ್ಳೆಯ ಆಳ ಸಮುದ್ರದಲ್ಲಿ ಝಾಕಿರ್ ಮೃತದೇಹ ಮೀನುಗಾರರಿಗೆ ದೊರಕಿತ್ತು. ಕೋಸ್ಟ್ ಗಾರ್ಡ್ ಪೊಲೀಸರು ಕೇಸು ದಾಖಲಿಸಿ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಕೊಳೆತಿದ್ದ ಮೃತದೇಹದ ಗುರುತು ಸಿಗದ ಕಾರಣ ಕೋಸ್ಟ್ ಗಾರ್ಡ್ ಪೊಲೀಸರು ಮೂರು ದಿವಸಗಳ ನಂತರ ಶವವನ್ನ ಹೂತು ದಫನಗೈದಿದ್ದಾರೆ.

ಈ ನಡುವೆ, ಝಾಕಿರ್ ಬೈಕ್ ಸೋಮೇಶ್ವರ ದೇವಸ್ಥಾನದ ಬಳಿ ದೊರಕಿದ್ದು ಆತ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕುಟುಂಬ ವರ್ಗದವರು ಮೃತ ಝಾಕಿರ್ ಮೃತದೇಹವನ್ನ ಮರಳಿ ತೆಗೆಸಿ, ಮನೆಗೆ ತರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಮೃತ ಝಾಕಿರ್ ಗೆ ಓರ್ವ ಪುತ್ರನಿದ್ದು, ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ.
Mangalore Ullal missing man body found in kumble beach in kerala, depression suspected. The deceased has been identified as Zakir from Pilar. Zakir was married recently and was helping his brother in fishing business.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm