ಬ್ರೇಕಿಂಗ್ ನ್ಯೂಸ್
14-10-22 08:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿದ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ ಮತ್ತು ಆತ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆತನ ಕಾರನ್ನು ಮುಂದಕ್ಕೆ ರಸ್ತೆಯಲ್ಲಿ ಓವರ್ ಟೇಕ್ ಮಾಡಿ ಹೋಗಲು ಬಿಡದೇ ಇದ್ದುದಕ್ಕೆ ಬೈದುಕೊಂಡು ತೆರಳಿದ್ದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ. ಕಾರಿನಲ್ಲಿ ಶಾಸಕರಿದ್ದ ಬಗ್ಗೆ ತಿಳಿದಿರಲಿಲ್ಲ ಎಂದಿದ್ದಾನೆ. ಕಾರಿನಲ್ಲಿ ಯಾವುದೇ ಆಯುಧ ಸಿಕ್ಕಿಲ್ಲ. ಅಲ್ಲದೆ, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಹರೀಶ್ ಪೂಂಜ ಗುರುವಾರ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ತೋರಿಸಿದ್ದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದರು. ಈ ಬಗ್ಗೆ ಹೇಳಿಕೆ ನೀಡಿದ್ದ ಹರೀಶ್ ಪೂಂಜ, ಜಿಹಾದಿಗಳಿಗೆ ಹೆದರಲ್ಲ. ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ. ಗೃಹ ಸಚಿವರು ಫೋನ್ ಮಾಡಿ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆಂದು ಹೇಳಿದ್ದರು. ಕೇರಳ ನೋಂದಣಿಯ ಕಾರು ಅದಾಗಿತ್ತು ಎಂದೂ ಹೇಳಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಸಕರಿಗೆ ಬೆದರಿಕೆ ಹಾಕುವ ಉದ್ದೇಶ ಇರಲಿಲ್ಲ ಎನ್ನುವುದು ಮೇಲ್ನೋಟಕ್ಕೆ ಪೊಲೀಸರಿಗೆ ದೃಢಪಟ್ಟಿದೆ. ಶಾಸಕರು ಎಸ್ಕಾರ್ಟ್ ಪಡೆಯಲು ಈ ರೀತಿ ಬೆದರಿಕೆ ನಾಟಕ ಮಾಡಿದ್ದಾರೆ ಎಂದೂ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ; ಫರಂಗಿಪೇಟೆ ಹೆದ್ದಾರಿಯಲ್ಲಿ ಕೃತ್ಯ
MLA Harish Poonja shown followed by unidentified car, car seized one held in Mangalore. The police have detained one person in connection with allegedly waylaying the car of Beltangady MLA Harish Poonja and flashing swords.The white Scorpio used for reportedly used for chasing the MLA's vehicle has also been seized.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm