ಬ್ರೇಕಿಂಗ್ ನ್ಯೂಸ್
21-10-22 02:43 pm Mangalore Correspondent ಕರಾವಳಿ
ಬಂಟ್ವಾಳ, ಅ.21 : ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿ ಸಿಕ್ಕಿಬಿದ್ದ ವಿಟ್ಲ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಸಾವನ್ನಪ್ಪಿದ ಘಟನೆ ಬಂಟ್ವಾಳ ಪುರಸಭೆ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿ ಬೆಳಗ್ಗೆ ತನ್ನ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ. ಪ್ರವೀಣ್ ಜೋಶಿ ಅವರಿದ್ದ ಫೀಗೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದೇ ವೇಳೆ, ಹಿಂಬದಿಯಿಂದ ಕೆಎಸ್ಸಾರ್ಟಿಸಿ ಬಸ್ ಬಂದಿದ್ದು ನಿಯಂತ್ರಣ ಸಿಗದೆ ಎರಡೂ ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಕ್ಕಿಬಿದ್ದ ಜೋಶಿ ಅವರನ್ನು ಹೊರ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಶಿ ಅವರನ್ನು ವಾಹನದಿಂದ ಹೊರತೆಗೆದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜೋಶಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಕಾರುಗಳ ಅತಿ ವೇಗದಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ.
Mangalore Chain accident in Bantwal, MESCOM engineer dies on spot.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm