ಬ್ರೇಕಿಂಗ್ ನ್ಯೂಸ್
25-10-22 05:45 pm Mangalore Correspondent ಕರಾವಳಿ
ಉಳ್ಳಾಲ, ಅ.25 : ಮುಡಿಪುವಿನ ಗೋವರ್ಧನ ಗಿರಿಯ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28ರಿಂದ 30ರ ತನಕ ನಡೆಯಲಿರುವ ಗೋವರ್ಧನೋತ್ಸವವನ್ನು ರಾಜ್ಯಸಭಾ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ ಎಂದು ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಹೇಳಿದರು.
ಗೋವರ್ಧನಗಿರಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಧ್ಯಾನಕೇಂದ್ರವನ್ನು ಈಗಾಗಲೇ ಲೋಕಾರ್ಪಣೆಗೊಳಿಸಲಾಗಿದ್ದರೂ ಆ ದಿನಗಳಲ್ಲಿ ಕೊರೊನಾ ಸಂಕಷ್ಟ ಎದುರಾದುದರಿಂದ ಹೆಚ್ಚಾಗಿ ಪ್ರಚಾರ ಪಡೆಯಲಿಲ್ಲ. ಜನರಿಗೆ ಇಲ್ಲಿನ ಪ್ರಾಕೃತಿಕ ಸೌಂದರ್ಯ ಸವಿಯುವ ಅವಕಾಶ ಸಿಗಲಿಲ್ಲ. ಇಲ್ಲಿನ ಮ್ಯೂಸಿಯಂನಲ್ಲಿ ಇರುವ ಪರಿಕರಗಳನ್ನು ನೋಡುವ, ಆಸ್ವಾದಿಸುವ ಅವಕಾಶ ಸಿಗಲಿಲ್ಲ. ಧ್ಯಾನಕೇಂದ್ರವನ್ನು ರಾಷ್ಟ್ರಾದ್ಯಂತ ಪ್ರಚಾರಗೊಳಿಸುವ ನಿಟ್ಟಿನಲ್ಲಿ ಗೋವರ್ಧನೋತ್ಸವ ಎಂಬ ಶೀರ್ಷಿಕೆಯಡಿಯಲ್ಲಿ ಮೂರು ದಿನಗಳ ಕಲೋತ್ಸವ ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ನಿತ್ಯವೂ ಸಭಾ ಕಾರ್ಯಕ್ರಮ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮ ನಡೆಯಲಿದೆ ಎಂದರು.



ಅ.28ರಂದು ಮುಡಿಪು ಪೇಟೆಯ ಶ್ರೀ ಮುಡಿಪಿನ್ನಾರ್ ಕ್ಷೇತ್ರದಿಂದ ವಿವಿಧ ಭಜನಾ ಸಂಕೀರ್ತನಾ ತಂಡಗಳೊಂದಿಗೆ ವೈಭವದ ಶೋಭಾಯಾತ್ರೆ ಹೊರಡಲಿದ್ದು ಸಾಂಸ್ಕೃತಿಕ ಕಲಾ ತಂಡಗಳ ಕಲಾ ಪ್ರದರ್ಶನ ನಡೆಯಲಿದೆ. ಬಳಿಕ ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉತ್ಸವ ಉದ್ಘಾಟಿಸಲಿದ್ದು, ಗೋವರ್ಧನಗಿರಿ ಸಂಸ್ಥಾಪಕ ಡಾ. ಮದನಮೋಹನ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ಬಾಮೀಜಿ ಆಶೀರ್ವಚನಗೈಯಲಿದ್ದಾರೆ.


ಉತ್ಸವ ಸಮಿತಿ ಪ್ರಧಾನ ಸಂಚಾಲಕ, ಶೈಲೇಂದ್ರ ಭರತ್ ನಾಯ್ಕ್, ಕಾರ್ಯಾಧ್ಯಕ್ಷ ಮಹೇಶ್ ಚೌಟ ಉಳಿಪಾಡಿಗುತ್ತು, ಧಾರ್ಮಿಕ ಮುಖಂಡರಾದ ರಾಜೇಶ್ ಶೆಟ್ಟಿ ಪಜೀರುಗುತ್ತು ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Dr Veerendra Heggade to inaugurate Govardanostava in Mudupi on October 28th.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm