ಬ್ರೇಕಿಂಗ್ ನ್ಯೂಸ್
01-11-22 05:45 pm Mangalore Correspondent ಕರಾವಳಿ
ಉಳ್ಳಾಲ, ನ.1 : ಅಬ್ಬಕ್ಕ ಭವನಕ್ಕೆ ಕನಿಷ್ಠ 25 ಕೋಟಿ ಅನುದಾನವನ್ನ ಸರಕಾರ ಮಂಜೂರು ಮಾಡಿದರೆ ರಾಣಿ ಅಬ್ಬಕ್ಕನ ಕುರಿತು ಸಂಪೂರ್ಣ ಚಿತ್ರಣ ಕೊಡಲು ಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ಅಬ್ಬಕ್ಕ ಭವನ ನಿರ್ಮಾಣ ಮಾಡುವುದೇ ನಮ್ಮ ಧ್ಯೇಯವಾಗಿರಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ಹೇಳಿದರು.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಪೆರ್ಮನ್ನೂರು ಬಬ್ಬುಕಟ್ಟೆಯ ಚಂದಪ್ಪ ಎಸ್ಟೇಟ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಾಸ್ತವದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ಸಮುದ್ರದಲ್ಲಿ ದೋಣಿಯಲ್ಲಿ ನಿಂತು ಪಂಜು(ಸೂಟೆ) ಹಿಡಿದು ಪೋರ್ಚುಗೀಸರ ವಿರುದ್ಧ ಹೋರಾಟ ನಡೆಸಿದ್ದು, ನಾವು ಮಾತ್ರ ಅಬ್ಬಕ್ಕಳಿಗೆ ವೃತ್ತ ಮಾಡಿ ಕುದುರೆಯಲ್ಲಿ ಕೂರಿಸಿದ್ದೇವೆ. ಸಾಧ್ಯವಾದರೆ ಆಕೆಯನ್ನ ದೋಣಿ ಏರಿಸುವ ಕಾರ್ಯ ನಡೆಸೋಣ. ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಿದಾಗ ಆಗುವ ಅವಮಾನಗಳು, ಕಾಲೆಳೆಯುವ ಮಂದಿಯ ಮುಂದೆ ನಾವು ಪಾರದರ್ಶಕವಾಗಿ ನಿಸ್ವಾರ್ಥವಾಗಿ ಪ್ರಾಮಾಣಿಕವಾಗಿ ದುಡಿದರೆ ಎಲ್ಲರ ಮನ ಗೆಲ್ಲಲು ಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ಅಬ್ಬಕ್ಕ ಭವನ ನಿರ್ಮಾಣ ಮಾಡಿಯೇ ಸಿದ್ಧ, ಅದಕ್ಕಾಗಿ ಅಬ್ಬಕ್ಕ ಉತ್ಸವ ಸಮಿತಿ ಸದಸ್ಯನಾಗಿ ನನ್ನಿಂದಾದ ಸೇವೆ ಖಂಡಿತ ಮಾಡುತ್ತೇನೆ. ಜಿಲ್ಲೆಯ ಪ್ರಮುಖ ತಾಣಗಳಲ್ಲಿ ಅಬ್ಬಕ್ಕ ಸೇರಿದಂತೆ ತುಳುನಾಡ ಸಾಧಕರ ಹೆಸರು ಮುಂದೆ ಕಾಣಬೇಕು. ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆ ಮಾಡಲಿ. ಯಾವುದೇ ಹೆಸರು ಪ್ರಸ್ತಾಪ ಮಾಡುವುದಿದ್ದರೂ ಅದಕ್ಕೆ ತುಳುನಾಡು ಎಂಬುದನ್ನು ಸೇರಿಸಬೇಕು ಎಂದು ಆಗ್ರಹಿಸಿದರು.
ಪತ್ರಕರ್ತ ಮನೋಹರ್ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ ಮನುಷ್ಯ ಜನ್ಮ ಸಾರ್ಥಕವಾಗಬೇಕಾದರೆ ಹರಿವ ನದಿಯಂತೆ ಇತರರಿಗಾಗಿ ಬದುಕುತ್ತಾ ಸಾಗಬೇಕು ಎಂದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಹಾಗೂ ಉಳ್ಳಾಲ ನಗರಸಭೆಯ ಮಾಜಿ ಸದಸ್ಯೆ ಮಿಸೆಸ್ ಕರ್ನಾಟಕ ಶಶಿಕಾಂತಿ ಉಳ್ಳಾಲ್ ಅವರನ್ನು ಸನ್ಮಾನಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ತನುಂಜಯ ರಾವ್, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ದಿನಕರ್ ಉಳ್ಳಾಲ್, ಸ್ವಾಗತಾಧ್ಯಕ್ಷ ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
25 crores is a must for the construction of Abbakka Bhavana in Mangalore says dayanand kattalsar.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm