ಬ್ರೇಕಿಂಗ್ ನ್ಯೂಸ್
01-11-22 10:46 pm Mangalore Correspondent ಕರಾವಳಿ
ಮಂಗಳೂರು, ನ.1 : ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ದೆಹಲಿ, ಪಂಜಾಬ್ ರಾಜ್ಯಗಳ ಬಳಿಕ ಗುಜರಾತ್ ವಿಧಾನಸಭೆ ಚುನಾವಣೆ ಗೆಲ್ಲಲಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಮಂಗಳವಾರ ನಗರದ ಡಾನ್ ಬಾಸ್ಕೋ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ವತಿಯಂದ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಎಎಪಿ ಸರಕಾರದ ಬಂದಾಗ ಉತ್ತಮ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಸೌಲಭ್ಯದೊಂದಿಗೆ ಶೂನ್ಯ ಪರ್ಸೆಂಟ್ ಕಮಿಷನ್, ನೂರು ಪರ್ಸೆಂಟ್ ಕೆಲಸ ಮಾಡಿ ತೋರಿಸುತ್ತೇವೆ ಎಂದು ಪೃಥ್ವಿ ರೆಡ್ಡಿ ಭರವಸೆ ನೀಡಿದರು. ಗುಜರಾತ್ ರಾಜ್ಯದಲ್ಲಿ 40 ವರ್ಷಗಳಿಂದ ಆಡಳಿತ ನಡೆಸುತ್ತಿದ್ದರೂ ಬಿಜೆಪಿ ಮುಖಂಡರಾದ ನರೇಂದ್ರ ಮೋದಿ, ಅಮಿತ್ ಶಾ ಈಗ ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಶಿಕ್ಷಣ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳು ಈಗ ರಾಹುಲ್ ಗಾಂಧಿಯವರನ್ನು ಪ್ರಶ್ನಿಸುತ್ತಿದ್ದಾರೆ. ಅಂಥ ಸ್ಥಿತಿ ಅಲ್ಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೂ ಜನರ ಸ್ಥಿತಿ ಸುಧಾರಣೆಯಾಗಿಲ್ಲ.
ಕರ್ನಾಟಕದ ಜನತೆ ಕಾಂಗ್ರೆಸ್, ಬಿಜೆಪಿಯನ್ನು ಕಡೆಗಣಿಸಿ ಎಎಪಿಗೆ ಬೆಂಬಲ ನೀಡಲಿದ್ದಾರೆ. ನಾವು ಜನರಲ್ಲಿ ಓಟು ಕೇಳಬೇಕಾಗಿಲ್ಲ. ನಾವು ಇದ್ದೇವೆ ಎಂದು ಪ್ರತಿ ಬೂತುಗಳಲ್ಲಿ ಕೂಡ ಮನವರಿಕೆ ಮಾಡಿದರೆ ಸಾಕು ಎಂದು ಪೃಥ್ವಿ ರೆಡ್ಡಿ ಹೇಳಿದರು. ಕರಾವಳಿಯ ಜಿಲ್ಲೆಗಳಲ್ಲಿ ಪಕ್ಷವನ್ನು ಕಟ್ಟಲು ಸಾಧ್ಯವಿದೆ ಎಂಬ ವಿಶ್ವಾಸವನ್ನು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿದ ಕಾರ್ಯಕರ್ತರು ನೀಡಿದ್ದಾರೆ ಎಂದವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕನಿಷ್ಟ ಒಂದೆರಡು ಶಾಸಕರನ್ನು ಗೆಲ್ಲಿಸಿಕೊಡುವ ಪ್ರಯತ್ನ ಮಾಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಸಂತೋಷ್ ಕಾಮತ್ ಹೇಳಿದರು. ಸಮಾವೇಶಕ್ಕೂ ಮುನ್ನ ನಗರದ ಸೋಜಾ ಆರ್ಕೇಡಿನಲ್ಲಿ ಆಮ್ ಆದ್ಮಿ ಪಕ್ಷದ ನೂತನ ಕಚೇರಿಯನ್ನು ಎಎಪಿ ಹಿತೈಷಿ ಮೈಕಲ್ ಡಿಸೋಜ ಉದ್ಘಾಟಿಸಿದರು. ಆಮ್ ಆದ್ಮಿ ಜಾತಿ, ಧರ್ಮ ಭೇದ ಇಲ್ಲದ ಪಕ್ಷವಾಗಿದ್ದು, ಭ್ರಷ್ಟಚಾರ ರಹಿತವಾಗಿ ಆಡಳಿತ ನೀಡುವ ಏಕೈಕ ಪಕ್ಷವಾಗಿದೆ. ಉತ್ತಮ ದೇಶವನ್ನು ಕಟ್ಟಲು ಜನರು ಆಮ್ ಆದ್ಮಿಯನ್ನು ಬೆಂಬಲಿಸಬೇಕು ಎಂದು ಮೈಕಲ್ ಡಿ ಸೋಜ ಹೇಳಿದರು.
ವೇದಿಕೆಯಲ್ಲಿ ಪಕ್ಷದ ರಾಜ್ಯ ಜತೆ ಕಾರ್ಯದರ್ಶಿ ವಿವೇಕಾನಂದ ಸಾಲಿನ್ಸ್, ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಅದಮಲೆ, ಮಂಗಳೂರು ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಉಡುಪಿ ಜಿಲ್ಲಾಧ್ಯಕ್ಷ ದಿವಾಕರ್ ಸನಿಲ್, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಬಾಲಕೃಷ್ಣ ನಾಯ್ಕ, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವಿಜಯನಾಥ ವಿಠಲ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಡಾ.ಬಿ.ಕೆ.ವಿಶುಕುಮಾರ್, ಸುಳ್ಯ ವಿಧಾನಸಭಾ ಕ್ಷೇತ್ರದ ಸುಮನಾ ಬೆಳ್ಳಾರ್ಕರ್, ಜಿಲ್ಲಾ ಕಾರ್ಯದರ್ಶಿ ವೇಣುಗೋಪಾಲ್ ಉಪಸ್ಥಿತರಿದ್ದರು.
ನೀರು ಕೊಡುವ ಯೋಗ್ಯತೆ ಇಲ್ಲ !
ಸಮಾವೇಶದಲ್ಲಿ ಮಾತನಾಡಿದ ನಾರಾಯಣ ಪ್ರಭು ಎಂಬವರು, ನಾವು ಜನಸಂಘದ ಕಾಲದಿಂದಲು ಆರ್ ಎಸ್ ಎಸ್ ಬಿಜೆಪಿಗಾಗಿ ಕೆಲಸ ಮಾಡುತ್ತಾ ಬಂದಿದ್ದೇವೆ. ನಮ್ಮ ಪರಿಸರದಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಯೋಗ್ಯತೆ ಆಡಳಿತ ನಡೆಸುವವರಿಗೆ ಇಲ್ಲ. ಇವರಿಗೆ ಆಗುವುದಿಲ್ಲವಾದರೆ ಮನೆಯಲ್ಲಿ ಇರಬಹುದಲ್ಲ, ಯಾಕೆ ಕಾರ್ಪೋರೇಟರ್ ಆಗಬೇಕಾಗಿತ್ತು. ಕಾರ್ಪೋರೇಟರ್ ಗಂಡನೂ ಹೆಂಡತಿಯ ಪರವಾಗಿ ಓಡಾಡುವ ವ್ಯವಸ್ಥೆ ಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
After Delhi Punjab we will also come to power in Gurjrath says Aam AAP in Mangalore.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm