ಬ್ರೇಕಿಂಗ್ ನ್ಯೂಸ್
12-11-22 12:59 pm Mangalore Correspondent ಕರಾವಳಿ
ಬಂಟ್ವಾಳ, ನ.12 : ಕಾಂತಾರ ಸಿನಿಮಾದ ಬಳಿಕ ತುಳುನಾಡಿನ ದೈವಗಳ ಮಹಿಮೆ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಸಂದರ್ಭದಲ್ಲೇ ದೂರದ ಉಕ್ರೇನ್ ದೇಶದ ಕುಟುಂಬವೊಂದು ತುಳುವರ ಆರಾಧ್ಯ ದೈವ ಕೊರಗಜ್ಜನಿಗೆ ಹರಕೆ ರೂಪದಲ್ಲಿ ಅಗೇಲು ಸೇವೆ ನೀಡಿರುವುದು ಸುದ್ದಿಯಾಗಿದೆ.
ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ಥಳೀಯರ ಸೂಚನೆಯಂತೆ ಕೊರಗಜ್ಜನಿಗೆ ಹರಕೆಯನ್ನು ಹೇಳಿಕೊಂಡಿದ್ದ ಕುಟುಂಬ, ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ಕುಮ್ಡೇಲುವಿನಲ್ಲಿ ಅಗೆಲು ಸೇವೆಯನ್ನು ನೆರವೇರಿಸಿದೆ. ಕೆಲವು ತಿಂಗಳ ಹಿಂದೆ ಉಕ್ರೇನ್ ನಿಂದ ಭಾರತ ಪ್ರವಾಸ ಕೈಗೊಂಡಿದ್ದ ಉಕ್ರೇನ್ ಪ್ರಜೆಗಳಾದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಬಂದಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದ ಆ್ಯಂಡ್ರೋ ಕುಟುಂಬ, ಅಲ್ಲಿ ನಾಡಿ ನೋಡಿ ಔಷಧಿ ಕೊಡುವ ಭಕ್ತಿ ಭೂಷಣ್ ಪ್ರಭೂಜಿಯವರನ್ನು ಭೇಟಿ ಮಾಡಿದ್ದರು.
ಈ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಉಕ್ರೇನ್ ದಂಪತಿ ಗುರೂಜಿ ಅವರಲ್ಲಿ ತಿಳಿಸಿದ್ದು, ಅದರಂತೆ ದೇಸಿ ದನದ ಜೊತೆಗೆ ವಿಹಾರ ಸಹಿತ ನಾಟಿ ಚಿಕಿತ್ಸೆ ಆರಂಭಿಸಿದ್ದರು. ಹಾಗಾಗಿ ಕಳೆದ ಮೂರು ತಿಂಗಳಿನಿಂದ ಕುಮ್ಡೇಲುವಿನ ಶ್ರೀ ರಾಧಾ ಸುರಭೀ ಗೋಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಕೃಷ್ಣ ಜನ್ಮಾಷ್ಟಮಿಯ ಸಂದರ್ಭ ಅದೇ ಪರಿಸರದಲ್ಲಿ ನಡೆದಿದ್ದ ಕೊರಗಜ್ಜನ ಕೋಲದಲ್ಲಿ ಮಗನಿಗೆ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಉಕ್ರೇನ್ ದಂಪತಿ ಕೋರಿಕೊಂಡಿದ್ದಲ್ಲದೆ, ಹುಷಾರಾದಲ್ಲಿ ಅಗೇಲು ಸೇವೆ ನೀಡುವುದಾಗಿ ಹರಕೆ ಹೇಳಿದ್ದರು. ಇದೀಗ ಮಗ ಮ್ಯಾಕ್ಸಿಂ ಗುಣಮುಖನಾಗಿರುವ ಹಿನ್ನೆಲೆ ಕುಟುಂಬ ಶುಕ್ರವಾರ ರಾತ್ರಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ.
ಭಕ್ತಿಭೂಷಣ್ ದಾಸ್ ಪ್ರಭೂಜಿ, ಪದ್ಮನಾಭ ಗೋವಿನ ತೋಟ, ರಾಮಚಂದ್ರ ಮಾರಿಪಳ್ಳ, ಯಾದವ ಕೊಡಂಗೆ, ನವೀನ್ ಮಾರ್ಲ ಮೊದಲಾದವರ ಉಪಸ್ಥಿತಿಯಲ್ಲಿ ಅಗೇಲು ಸೇವೆ ನಡೆದಿದ್ದು, ಉಕ್ರೇನ್ ಕುಟುಂಬವೂ ಸಂತೃಪ್ತ ಮನೋಭಾವದಿಂದ ಅಗೇಲು ಸೇವೆಯಲ್ಲಿ ಭಾಗವಹಿಸಿತ್ತು.
Son unwell, Ukraine couple visited Tulunadu Koragajja Temple for healing, perform Agelu seve in Bantwal Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm