ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm