ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್‌ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್‌ಝಡ್‌ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್‌ಝಡ್‌ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್‌ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್‌ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್‌ಗಳು ಸೇರಿದಂತೆ ಒಟ್ಟು 14 ಬ್ಲಾಕ್‌ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್‌ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm