ಬ್ರೇಕಿಂಗ್ ನ್ಯೂಸ್
18-11-22 08:04 pm Mangalore Correspondent ಕರಾವಳಿ
ಮಂಗಳೂರು, ನ.18 : ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ಸಮಿತಿ ಕಳೆದ 22 ದಿನಗಳಿಂದ ನಡೆಸುತ್ತಿರುವ ಧರಣಿ ಬೆಂಬಲಿಸಿ ಸಮಾನ ಮನಸ್ಕ ಸಂಘಟನೆಗಳು ಶುಕ್ರವಾರ ಸಂಜೆ ತಡಂಬೈಲ್ ಜಂಕ್ಷನ್ ನಿಂದ ಪ್ರತಿಭಟನಾ ಸ್ಥಳಕ್ಕೆ ಕಾಲ್ನಡಿಗೆ ಜಾಥಾ ನಡೆಸಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ್ ರೈ, ಸುರತ್ಕಲ್ ಟೋಲ್ ಹೋರಾಟ ನಿರಂತರವಾಗಿ 22 ದಿನಗಳಿಂದ ನಡೆಯುತ್ತಿದ್ದು ಜನರಿಂದ ಸುಂಕ ವಸೂಲಿ ಮಾಡುವುದು ಸಂಪೂರ್ಣ ನಿಲ್ಲುವ ತನಕ ಅಹೋರಾತ್ರಿ ಧರಣಿ ಮುಂದುವರಿಯುತ್ತದೆ. ಜಿಲ್ಲೆಯ ಗ್ರಾಮೀಣ ಭಾಗಕ್ಕೂ ಹೋರಾಟದ ಬಿಸಿ ತಪ್ಪಿದ್ದು ಸಮಾನ ಮನಸ್ಕರು ಒಂದೇ ವೇದಿಕೆಯಲ್ಲಿ ಸೇರಿರುವುದು ದೊಡ್ಡ ಸಾಧನೆಯಾಗಿದೆ. ಟೋಲ್ ತೆರವುಗೊಳಿಸುವುದು ನಮ್ಮೆಲ್ಲರ ಉದ್ದೇಶವಾಗಿದೆ. ಹೋರಾಟಕ್ಕೆ ನೈತಿಕ ಬೆಂಬಲ ನೀಡಿರುವ ಜಿಲ್ಲೆಯ ಜನರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ವಿವಿಧ ಸಂಘಟನೆಗಳು ನಡೆಸಿದ ಹೋರಾಟದ ಫಲವಾಗಿ ತಾರ್ಕಿಕ ಅಂತ್ಯದತ್ತ ಸಾಗಿದೆ. ಮುಂದೆ ಇನ್ನಷ್ಟು ಕಠಿಣ ಸಮಸ್ಯೆಗಳು ಎದುರಾಗಬಹುದು. ಆಗಲೂ ಇದೇ ರೀತಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಹೋರಾಟ ಮುಂದುವರಿಸಬೇಕು ಎಂದರು.
ಬಳಿಕ ಮಾತಾಡಿದ ಹೋರಾಟಗಾರ ಮುನೀರ್ ಕಾಟಿಪಳ್ಳ "ಇದು ಜಾತಿ, ಧರ್ಮ, ಪಕ್ಷ ಮೀರಿ ಬೆಳೆದಿರುವ ಹೋರಾಟ. ಇಲ್ಲಿ ಬಿಜೆಪಿ ನಾಯಕರು ಮಾತ್ರ ಇಲ್ಲ, ಮತದಾರರಿದ್ದಾರೆ. ನಾನಾ ಪಕ್ಷ, ಸಂಘಟನೆಗಳ ಸಾವಿರಾರು ಕಾರ್ಯಕರ್ತರು, ಮುಖಂಡರು ಜೊತೆಯಾಗಿದ್ದಾರೆ. ಹೀಗಿರುವಾಗ ಜನರಿಗೆ ಬೇಡವಾದ ಟೋಲ್ ಗೇಟ್ ಖಂಡಿತ ಬೇಡ. ಸರಕಾರ ಆಧ್ಯಾದೇಶ ಜಾರಿಗೊಳಿಸಿಯೂ ಟೋಲ್ ತೆರವು ಮಾಡದೇ ಇರುವುದು ಯಾಕೆ? ಸುಂಕ ವಸೂಲಿ ನಿಂತಿಲ್ಲ ಯಾಕೆ? ಒಂದೊಮ್ಮೆ ಇಲ್ಲಿಂದ ಟೋಲ್ ಹೆಜಮಾಡಿಯಲ್ಲಿ ವಿಲೀನಗೊಂಡ ಬಳಿಕ ಅಲ್ಲಿ ದುಪ್ಪಟ್ಟು ಸುಂಕ ವಸೂಲಿ ಮಾಡಿದರೆ ಇದೇ ಹೋರಾಟ ಮುಂದಿನ ದಿನಗಳಲ್ಲಿ ಹೆಜಮಾಡಿಗೆ ಸ್ಥಳಾಂತರಗೊಳ್ಳುವುದು ನಿಶ್ಚಿತ ಎಂದರು.
ಬಳಿಕ ಮಾತನಾಡಿದ ಮೊಯಿದೀನ್ ಬಾವಾ ಅವರು, "ಕೇಂದ್ರದ ಆದೇಶ ಇದ್ದರೂ ಟೋಲ್ ತೆರವು ಮಾಡದೇ ಇರುವುದು ನಾಚಿಕೆಗೇಡು. ಜಿಲ್ಲಾಧಿಕಾರಿ ಸಂಸದರ ಆದೇಶಕ್ಕೆ ಮಣಿದು ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಈ ಭಾಗದ ಶಾಸಕರು ಟೋಲ್ ರದ್ದಾದ ಕೂಡಲೇ ಪತ್ರಿಕಾಗೋಷ್ಠಿ ಕರೆದು ತಾನೂ ಹೋರಾಟ ಮಾಡಿದ್ದಾಗಿ ಹೇಳುತ್ತಾರೆ. ಶಾಸಕರು ಈ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ. ನಾನು ಸಿದ್ಧನಿದ್ದೇನೆ. ಒಂದೇ ಒಂದು ದಿನವೂ ನಿಮಗೆ ಜನರ ಪರವಾಗಿ ಹೋರಾಟ ಮಾಡಲು ಸಮಯ ಸಿಕ್ಕಿಲ್ಲವೇ?" ಎಂದು ಪ್ರಶ್ನಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಮೇಯರ್ ಕೆ.ಅಶ್ರಫ್, ಸುನಿಲ್ ಕುಮಾರ್ ಬಜಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಮುನೀರ್ ಕಾಟಿಪಳ್ಳ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ಶಾಲೆಟ್ ಪಿಂಟೋ, ಕೃಪಾ ಆಳ್ವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಸುಮತಿ ಹೆಗ್ಡೆ, ವಿಶ್ವಾಸ್ ದಾಸ್, ರಾಜೇಶ್ ಕುಳಾಯಿ, ಬಿ.ಕೆ. ಇಮ್ತಿಯಾಜ್, ಎಂ.ಜಿ. ಹೆಗಡೆ, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.
Mangalore Surathkal Toll protest, protesters hold rally, say won't stop protesting until collection stops says Ramanth Rai senior Congress leader.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am