ಬ್ರೇಕಿಂಗ್ ನ್ಯೂಸ್
19-11-22 04:34 pm Mangalore Correspondent ಕರಾವಳಿ
ಮಂಗಳೂರು, ನ.19 : ಬಂಡವಾಳ ಹೂಡಿಕೆದಾರರ ಸಮಾವೇಶದ ಫಲವಾಗಿ ನವೀಕರಿಸಬಲ್ಲ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲ ನೀರಿನಿಂದ ಅಮೋನಿಯಾ ಉತ್ಪಾದನೆ ಕ್ಷೇತ್ರದಲ್ಲಿ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದೆ. ಈ ಪೈಕಿ ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿ ಪ್ರದೇಶದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವೇಳೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹಸಿರು ಯೋಜನೆ ಉತ್ಪಾದನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ ಮೂರು ನವೀಕರಿಸಬಹುದಾದ ಇಂಧನ ಉತ್ಪಾದನೆ ಬಗ್ಗೆ ಉನ್ನತ ಮಟ್ಟದ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್, ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ಹೇಳಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು, ಗಲ್ಫ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ತಲೆ ಎತ್ತಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಘಟಕ ಬರಲಿದೆ. ಇದರಿಂದ ನೇರ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಜನೆಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು.


ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿ ಮಳೆಯ ಕಾರಣ ತಡವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗುತ್ತೇನೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ ಕರೆಯಲಾಗುವುದು. ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದರು.


ಮತದಾರರ ಪರಿಷ್ಕರಣೆಯಲ್ಲಿ ಲೋಪ ಆಗಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರತಿ ವರ್ಷ ಹಾಗೂ ಚುನಾವಣೆ ಸಂದರ್ಭದಲ್ಲಿ ಈ ಪ್ರಕ್ರಿಯೆ ಮಾಡಲಾಗುತ್ತದೆ. ಇದು ಚುನಾವಣಾ ಆಯೋಗದ ನಿರಂತರ ಪ್ರಕ್ರಿಯೆ. ವಿರೋಧ ಪಕ್ಷದವರು ಎಲ್ಲದ್ದಕ್ಕೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ವಿಚಾರದಲ್ಲಿ ನ್ಯಾಯಾಂಗ ತನಿಖೆಯಾಗಿ ಅದರಿಂದ ಪಾರಾಗಲು ಅನುಕೂಲವಾಗಿತ್ತು. ಶೀಘ್ರವಾಗಿ ಈ ಪ್ರಕರಣದಲ್ಲಿ ಪೊಲೀಸರು ಕೆಲಸ ಮಾಡಲಿದ್ದಾರೆ ಎಂದರು.
Chief minister (CM) Basavaraj Bommai said, “Rs 2 lac crore investments have come for renewable energy, hydrogen fuel and production of ammonia from sea water.”He was speaking at the Mangaluru International Airport on Saturday November 19. He was in the city to unveil the statue of Kedambadi Ramaiah Gowda at Tagore Park, Bavutagudda.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm