ಬ್ರೇಕಿಂಗ್ ನ್ಯೂಸ್
13-10-20 07:35 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಕ್ಷಿಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಿಡಿಕಾರಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಅಭ್ಯರ್ಥಿಯಾದ ಕುಸುಮಾ ತನ್ನ ದಿವಂಗತ ಪತಿಯ ಹೆಸರಿನಲ್ಲಿ ಮತ ಯಾಚಿಸಬಾರದು ಎಂದು ಶೋಭಾ ಹೇಳಿರುವುದು ಅಕ್ಷಮ್ಯ. ಶೋಭಾ ಹೇಳಿಕೆ ಭಾರತೀಯ ಸಂಸ್ಕೃತಿಗೆ ತದ್ವಿರುದ್ಧವಾಗಿದೆ. ಸಪ್ತಪದಿ ತುಳಿದವರಿಗೆ ಮಾತ್ರ ಪತಿಯ ಮಹತ್ವ ಗೊತ್ತಿರುತ್ತದೆ ಎಂದು ಶೋಭಾ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದರು.

ತನ್ನ ಕ್ಷೇತ್ರದ, ಜಿಲ್ಲೆಯ, ರಾಜ್ಯದ ಸಮಸ್ಯೆ ಬಗ್ಗೆ ಸಂಸತ್ತಿನಲ್ಲಿ ಮಾತನಾಡದ ಶೋಭಾ ಕರಂದ್ಲಾಜೆ ಕೇವಲ ಭಾವನಾತ್ಮಕ ವಿಚಾರಗಳಿಗೆ ಮಾತ್ರ ಪ್ರತಿಕ್ರಿಯೆ ನೀಡುವ ಮೂಲಕ ರಾಜಕಾರಣ ಮಾಡುತ್ತಾರೆ. ಜಾತಿ ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದು ಯಾರಿಗೂ ಶೋಭೆಯಾಗದು ಎಂದು ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಾರ್ಯವೈಖರಿ ಬಗ್ಗೆ ಮಿಥುನ್ ರೈ ನೀಡಿದ ಹೇಳಿಕೆಯನ್ನು ಬಿಜೆಪಿಗರು ತಪ್ಪಾಗಿ ಅರ್ಥೈಸಿದ್ದಾರೆ. ಮಿಥುನ್ ಯಾವತ್ತೂ ಜೋಗಿ ಸಮುದಾಯಕ್ಕೆ ಅವಮಾನ ಆಗುವಂಥ ಹೇಳಿಕೆಯನ್ನು ನೀಡಿಲ್ಲ. ಅವರು ನೀಡಿದ ಹೇಳಿಕೆಯನ್ನು ಮುಂದಿಟ್ಟು ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಶಕುಂತಲಾ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಭಾ ಕುಳಾಯಿ, ನಮಿತಾ ಡಿ ರಾವ್, ಶಶಿಕಲಾ ಪದ್ಮನಾಭ, ಮಂಜುಳಾ ನಾಯಕ್, ಶೋಭಾ ಕೇಶವ್, ಸುರೇಖಾ ಚಂದ್ರ ಇತರರು ಉಪಸ್ಥಿತರಿದ್ದರು.
Puttur former MLA Shakuntala Shetty taunts MP Shobha Karandlaje slamming what will women know the value of a husband when she's not married at a press meet held at congress office in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am