ಬ್ರೇಕಿಂಗ್ ನ್ಯೂಸ್
07-12-22 10:15 pm Mangalore Correspondent ಕರಾವಳಿ
ಮಂಗಳೂರು, ಡಿ.7: ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಗಳಿಸಿದ್ದಲ್ಲದೆ, 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಸೋಲಿಸಿ ಅಧಿಕಾರದ ಗದ್ದುಗೆಯೇರಿದ್ದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಮಂಗಳೂರಿನಲ್ಲಿ ಆಪ್ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸಿಹಿ ಹಂಚಿಕೊಂಡು ಸಂಭ್ರಮ ಆಚರಿಸಿದ್ದಾರೆ.
ಬಲ್ಮಠದಲ್ಲಿರುವ ಪಕ್ಷದ ಕಚೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದೆಹಲಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ರಾಜಧಾನಿಯ ಜನರು ಬಹುಮತ ನೀಡಿದ್ದಾರೆ. ಆಮೂಲಕ ಪಕ್ಷದ ಆಡಳಿತಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲರ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜನರು ಮತ ನೀಡಿದ್ದು, ದೆಹಲಿ ಪಾಲಿಕೆಯಲ್ಲಿ 15 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಜನರು ಸೋಲಿಸಿದ್ದಾರೆ. ಇದು ಗುಜರಾತ್ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದು ಹೇಳಿದ್ದಾರೆ.
250 ಸದಸ್ಯಬಲದ ದೆಹಲಿ ಪಾಲಿಕೆಯಲ್ಲಿ ಆಪ್ 134 ಸ್ಥಾನಗಳನ್ನು ಗೆದ್ದಿದ್ದು, ಪೂರ್ಣ ಬಹುಮತ ಗಿಟ್ಟಿಸಿದೆ. ಗುಜರಾತ್ ಫಲಿತಾಂಶ ಡಿ.8ರಂದು ಪ್ರಕಟವಾಗಲಿದ್ದು, ಅದಕ್ಕೂ ಒಂದು ದಿನ ಮೊದಲೇ ದೆಹಲಿ ಜನರ ಫಲಿತಾಂಶ ಹೊರಬಿದ್ದಿರುವುದು ಪಕ್ಷಕ್ಕೆ ಬೂಸ್ಟರ್ ಸಿಕ್ಕಂತಾಗಿದೆ. ಪಕ್ಷದ ಪ್ರಮುಖರು ಗುಜರಾತಿನಲ್ಲೂ ಇದೇ ರೀತಿಯ ಫಲಿತಾಂಶ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
AAP ends Bjp 15 year hold on Delhi civic body, celebration in Mangalore by Santosh Kamath and other leaders. The Aam Aadmi Party (AAP) has won the Municipal Corporation of Delhi (MCD) election as it pulled ahead of the BJP, which has ruled the civic body for the past 15 years, after over five hours of vote counting.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm