ಬ್ರೇಕಿಂಗ್ ನ್ಯೂಸ್
11-12-22 01:10 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಶನಿವಾರ ತಡರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ನಗರದ ಕೊಟ್ಟಾರದಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆಗೆ ಇಬ್ಬರು ಯುವತಿಯರು ಸುತ್ತಾಡುತ್ತಿದ್ದನ್ನು ನೋಡಿದ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರಶ್ನೆ ಮಾಡಿದ್ದಾರೆ. ಎಲ್ಲಿ ಹೋಗ್ತಿದೀರಾ ನೀವು ಇಷ್ಟೊತ್ತಿಗೆ ಎಂದು ಕೇಳಿದ್ದಕ್ಕೆ, ನಾವು ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದರು. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಕೇಳಿದ್ದಕ್ಕೆ ತಡಬಡಾಯಿಸಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಉರ್ವಾ ಪೊಲೀಸರನ್ನು ಕರೆಸಿದ್ದು ಸ್ಥಳದಲ್ಲೇ ಜೋರು ಮಾಡಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

ಯುವಕ- ಯುವತಿಯರನ್ನು ಬಳಿಕ ಉರ್ವಾ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ. ಹಿಂದು ಯುವತಿಯರ ಜೊತೆ ಮುಸ್ಲಿಂ ಯುವಕರು ತಿರುಗಾಡಿದರೆ, ಹಲ್ಲೆ ನಡೆಸುವ ಕೃತ್ಯ ಕಳೆದ ಒಂದೆರಡು ತಿಂಗಳಲ್ಲಿ ಹೆಚ್ಚಿದ್ದು 15-20 ದಿನಗಳ ಅಂತರದಲ್ಲಿ ನಾಲ್ಕನೇ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆಂದು ಪೊಲೀಸರು ಹೇಳಿದ್ದರೂ, ಈ ರೀತಿಯ ಘಟನೆಗಳಿವೆ ಕಡಿವಾಣ ಬಿದ್ದಿಲ್ಲ. ಜೊತೆಗೆ, ಹದ್ದುಮೀರಿದ ಯುವಕ- ಯುವತಿಯರ ವರ್ತನೆಗಳೂ ಕಡಿಮೆಯಾಗಿಲ್ಲ.
Moralpolice, Bajarangdal members thrash Hindu girls for roaming with Muslim youths in Mangalore. Urwa police are now investigating the case.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm