ಬ್ರೇಕಿಂಗ್ ನ್ಯೂಸ್
17-12-22 11:08 pm Mangalore Correspondent ಕರಾವಳಿ
ಮಂಗಳೂರು, ಡಿ.17 : ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್.ಎಸ್. ಯು.ಐ. ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸವಾದ್ ಸುಳ್ಯ, ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಮಂಗಳೂರು ವಿವಿಯಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್‌ಇಪಿ ನೀತಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು ವಿ.ವಿ. ಒಂದು ವರ್ಷದಿಂದ ಫಲಿತಾಂಶ ಪ್ರಕಟಿಸಿಲ್ಲ. ಉನ್ನತ ವ್ಯಾಸಂಗಕ್ಕೆ ಹೋಗುವವರಿಗೆ ಇದರಿಂದ ಸಮಸ್ಯೆಯಾಗಿದೆ. ಗೊಂದಲ ಬಗೆಹರಿಯುವ ಮುನ್ನವೇ ಎನ್‌ಇಪಿ ಜಾರಿಯಾಗುತ್ತಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ಸಮರ್ಪಕ ವಾಗಿ “ಅರಿವು ಸಾಲ’ ಕಲ್ಪಿಸಬೇಕು. ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಹಲವು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾರ್ಜನೆ ಮಾಡುತ್ತಾರೆ. ತತ್‌ಕ್ಷಣ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಎನ್.ಎಸ್.ಯು.ಐ. ಮುಖಂಡರಾದ ಸುಹಾನ್ ಆಳ್ವ, ಶ್ವಾನ್ ಸಿರಿ, ಸಫಾನ್ ಕುದ್ರೋಳಿ, ಸಿರಾಜ್ ಗುದ್ರು, ಓಂಶ್ರೀ, ಸಾಹಿಲ್, ನಿಖೀಲ್ ಶೆಟ್ಟಿ, ಅಝೀಮ್, ಅಹಾ°ಫ್, ಪ್ರಜ್ವಲ್, ಆತೂಫ್ ಇದ್ದರು.
NSUI activist statewide protest against negligence of degree student result in Mangalore.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm