ಬ್ರೇಕಿಂಗ್ ನ್ಯೂಸ್
15-10-20 07:48 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 15 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದ್ದು, ಅ.17ರಿಂದ ಅ.27ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಅ.17ರ ಬೆಳಗ್ಗೆ 11.30ಕ್ಕೆ ಕಲಶ ಪ್ರತಿಷ್ಠೆ, 12.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಯಲಿದೆ. 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ಸಂಜೆ 7ರಿಂದ ಭಜನಾ ಕಾರ್ಯಕ್ರಮ, 9ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಲಿದೆ.

ಅ.18ರಂದು ದುರ್ಗಾ ಹೋಮ, ಅ.19ರಂದು ಆರ್ಯ ದುರ್ಗಾ ಹೋಮ, ಅ.20ರಂದು ಭಗವತೀ ದುರ್ಗಾ ಹೋಮ, ಅ.21ರಂದು ಕುಮಾರಿ ದುರ್ಗಾ ಹೋಮ, ಅ.22ರಂದು ಅಂಬಿಕಾ ದುರ್ಗಾ ಹೋಮ, ಅ.23ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ.24ರಂದು ಚಂಡಿಕಾ ಹೋಮ, ಹಗಲೋತ್ಸವ, ಅ.25ರಂದು ಸರಸ್ವತೀ ದುರ್ಗಾ ಹೋಮ, 11.30ಕ್ಕೆ ಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ, ಅ.26ರಂದು ವಾಗೀಶ್ವರಿ ದುರ್ಗಾ ಹೋಮ, ಅ.27ರಂದು ರಾತ್ರಿ 8.00ಕ್ಕೆ ಗುರುಪೂಜೆ ನಡೆಯಲಿದೆ.

ಕುದ್ರೋಳಿ ಮಂಗಳೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಆರು ವರ್ಷದೊಳಗಿನ ಮಕ್ಕಳನ್ನು ಉತ್ಸವದ 10 ದಿನ ದೇವಳಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಮಾಸ್ಕ್ ಇಲ್ಲದವರಿಗೆ ಪ್ರವೇಶ ಇರುವುದಿಲ್ಲ. ದೇವಸ್ಥಾನ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್‌ಗೊಳಪಡಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ದೇವಸ್ಥಾನದ ವಠಾರ, ದೇವಾಲಯದೊಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೋ, ಸೆಲ್ಫಿ ಕಡ್ಡಾಯ ನಿಷೇಧ ಮಾಡಲಾಗಿದೆ.
ಹಿರಿಯ ನಾಗರಿಕರು ಮನೆಯಲ್ಲೇ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನೇರ ಪ್ರಸಾರ, ಇವರ ಪರವಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗುವುದು. ಪ್ರತಿನಿತ್ಯ ಮಧ್ಯಾಹ್ನ 12.30ರಿಂದ 2.30ರ ತನಕ ದೇವಸ್ಥಾನದ ನಿರ್ಗಮನ ದ್ವಾರದಲ್ಲಿ ಅನ್ನಪ್ರಸಾದ ಪ್ಯಾಕೇಟ್ ನೀಡಲು ನಿರ್ಧರಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಅ.26ರಂದು ನವದುರ್ಗೆ, ಶಾರದಾ ವಿಸರ್ಜನೆ ,ಅ.26ರ ಸೋಮವಾರ ಬೆಳಗ್ಗೆ 10ಕ್ಕೆ ವಾಗೀಶ್ವರಿ ದುರ್ಗಾ ಹೋಮ, 1ಕ್ಕೆ ಶಿವಪೂಜೆ, 1.15ಕ್ಕೆ ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ, ರಾತ್ರಿ 7.30ರಿಂದ ಜನಕ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ, ಶ್ರೀಶಾರದಾ ವಿಸರ್ಜನೆ, ಅವಭೃತ ಸ್ನಾನ ನಡೆಯಲಿದೆ.
This Dasra 2020 Mangalore Kudroli temple issues guidelines were minor kids are not allowed and mobile phone are strictly prohibited inside the temple premsies.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am