ಬ್ರೇಕಿಂಗ್ ನ್ಯೂಸ್
21-12-22 10:03 pm Mangalore Correspondent ಕರಾವಳಿ
ಮಂಗಳೂರು, ಡಿ.21 : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಡಿ.21ರಿಂದ 27ರ ವರೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಚಾಲನೆ ನೀಡಿ ಮಾತನಾಡಿದರು. ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಗಳು, ವಿದ್ಯಾರ್ಥಿಗಳು ಮತ್ತು ಘಟಕದ ನಾಯಕರು ಮತ್ತು ವಿದೇಶಗಳ ವಿದ್ಯಾರ್ಥಿಗಳು ಹಾಗೂ ವಿದೇಶಿ ಪ್ರಜೆಗಳು ಭಾಗವಹಿಸಿದ್ದಾರೆ.
ಜವಾಬ್ದಾರಿಯುತ ನಾಗರಿಕರಾಗಿ ದೇಶ ಸೇವೆ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ಕೊಡುಗೆ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವೇಗವಾಗಿ ಹೆಚ್ಚುತ್ತಿವೆ. ಕಳೆದ 100 ವರ್ಷಗಳಲ್ಲಿ 6.50 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರನ್ನು ಸಿದ್ಧಪಡಿಸಲಾಗಿದೆ. ಸಂಸ್ಥೆಯ ಧ್ಯೇಯ ವಾಕ್ಯ “ಸಿದ್ಧರಾಗಿರಿ ಮತ್ತು ಸೇವೆ ಮಾಡಿ” ಎನ್ನುವಂತೆ ಸ್ವಯಂಸೇವಕರು ಸರ್ಕಾರದ ಪ್ರಮುಖ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ ಎಂದು ರಾಜ್ಯಪಾಲರು ಹೇಳಿದರು.
ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು 'ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ' ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಸ್ವಚ್ಛ ಮತ್ತು ಹಸಿರು ಭಾರತವನ್ನು ನಿರ್ಮಿಸಲು, 'ಸ್ವಚ್ಛ ಭಾರತ್ ಮಿಷನ್' ಅನ್ನು ಪ್ರಾರಂಭಿಸಲಾಗಿದೆ. ಮುಂದಿನ 25 ವರ್ಷಗಳ ಪ್ರಯಾಣವು ನವ ಭಾರತ ನಿರ್ಮಾಣಕ್ಕೆ ಸುವರ್ಣ ಯುಗವಾಗಿದೆ. ಈ ಅಮೃತ ಘಳಿಗೆಯಲ್ಲಿ ನಮ್ಮ ಸಂಕಲ್ಪಗಳ ಸಾಧನೆಯು ನಮ್ಮನ್ನು ಸ್ವಾತಂತ್ರ್ಯದ 100 ವರ್ಷಗಳ ವರೆಗೆ ಕೊಂಡೊಯ್ಯುತ್ತದೆ ಎಂದು ಹೇಳಿದರು.
ಅದಮ್ಯ ಧೈರ್ಯ, ಸಂಕಲ್ಪ, ನಿಸ್ವಾರ್ಥ ಸೇವೆ ಶ್ಲಾಘನೀಯ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕದ ಮುಖ್ಯ ಆಯುಕ್ತರಾದ ಪಿ.ಜಿ. ಆರ್ ಸಿಂಧಿಯಾ ಮತ್ತು ಅವರ ತಂಡ ಹಾಗೂ ಎಲ್ಲಾ ಪದಾಧಿಕಾರಿಗಳು ಮಾಡುತ್ತಿರುವ ಕೆಲಸ ಪ್ರಶಂಸನೀಯ ಎಂದರು.
ರಾಜ್ಯಸಭೆ ಸಂಸದರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ್ ಕೋಟ್ಯಾನ್, ವಿಶ್ವ ಸಂಸ್ಥೆಯ ಸ್ಕೌಟ್ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಸ್ವಾಗತಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ವಂದಿಸಿದರು.
The Governor of Karnataka Thawar Chand Gehlot inaugurated the first-ever International Cultural Jamboree at Alva’s Campus, Moodbidri here on December 21..The programme began with the National Anthem followed by the Scouts and Guides Anthem. State Chief Commissioner of Scouts and Guides P G R Sindhia welcomed the gathering. The programme was inaugurated by the Governor of Kanrakata Thawar Chand Gehlot by lighting the traditional lamp along with other dignitaries on the dais.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm