ಬ್ರೇಕಿಂಗ್ ನ್ಯೂಸ್
30-12-22 05:53 pm Udupi Correspondent ಕರಾವಳಿ
ಉಡುಪಿ, ಡಿ.30 : ನೂರಾರು ಜನರಿಂದ ಹಣ ಸಂಗ್ರಹಿಸಿ ವಂಚನೆ ನಡೆಸಿರುವ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿವಿ ಲಕ್ಷ್ಮೀನಾರಾಯಣ ಸೇರಿದಂತೆ ಆರು ಮಂದಿ ನಿರ್ದೇಶಕರ ಆಸ್ತಿ ಮುಟ್ಟುಗೋಲಿಗೆ ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗೆ ಉಡುಪಿ ನಗರಸಭೆ ಪೌರಾಯುಕ್ತ, ಜಿಲ್ಲೆಯ ಎಲ್ಲ ತಹಸೀಲ್ದಾರರು ಹಾಗು ಉಪ ನೋಂದಣಾಧಿಕಾರಿಯವರಿಗೆ ಪೊಲೀಸರು ನೋಟೀಸ್ ಮಾಡಿದ್ದು, ಆರೋಪಿಗಳಿಗೆ ಸೇರಿದ ಆಸ್ತಿಗಳನ್ನು ಯಾವುದೇ ರೀತಿಯಲ್ಲಿ ಪರಭಾರೆ ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯ ಮೂಡನಿಡಂಬೂರು ಗ್ರಾಮದ ಮಾರುತಿ ವೀಥಿಕಾ ರಸ್ತೆಯಲ್ಲಿರುವ ಕೃಷ್ಣಾಪುರ ಮಠದ ಬಿಲ್ಡಿಂಗ್ ನಲ್ಲಿ 2013ರಲ್ಲಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಗೊಂಡಿತ್ತು. ಬಿ.ವಿ. ಲಕ್ಷ್ಮೀನಾರಾಯಣ ಎಂಬವರು ಅಧ್ಯಕ್ಷರಾಗಿದ್ದು, ಇವರ ಹತ್ತಿರದ ಸಂಬಂಧಿಕರಾದ ರವಿ ಉಪಾಧ್ಯ, ಬಿ.ವಿ ಬಾಲಕೃಷ್ಣ, ಭಾಸ್ಕರ ಉಪಾಧ್ಯ, ಉದಯ ಉಪಾಧ್ಯ, ಪತ್ನಿ ರಾಧಿಕಾ ಉಪಾಧ್ಯ, ಬಿವಿ ಬಾಲಕೃಷ್ಣ ಅವರ ಪತ್ನಿ ಸುಜಾತ ಸಹಕಾರಿ ಸಂಘದ ನಿರ್ದೇಶಕರಾಗಿದ್ದರು. ಸಾರ್ವಜನಿಕರಿಗೆ 10ರಿಂದ 12 ಶೇಕಡಾ ಬಡ್ಡಿ ನೀಡುವುದಾಗಿ ಹೇಳಿ ಸುಮಾರು 700 ಜನರಿಂದ 40ರಿಂದ 50 ಕೋಟಿ ಹಣವನ್ನು ಸಂಗ್ರಹ ಮಾಡಿದ್ದಾರೆ. ಆದರೆ 2022ರ ಜೂನ್ ತಿಂಗಳ ನಂತರ ಗ್ರಾಹಕರಿಗೆ ಬಡ್ಡಿ ನೀಡದೆ ವಂಚಿಸಿದ್ದು ಕಚೇರಿಯನ್ನು ಮುಚ್ಚಿರುವ ಬಗ್ಗೆ ಪ್ರಕಾಶ್ ಕಾಮತ್ ಎಂಬವರು ಉಡುಪಿ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಬಗ್ಗೆ ಪೊಲೀಸರು ಕೋರ್ಟಿನಿಂದ ವಾರೆಂಟ್ ಪಡೆದು ಸಹಕಾರಿ ಸಂಘದ ಕಚೇರಿಯನ್ನು ಸೀಲ್ ಮಾಡಿದ್ದಾರೆ. ಅಲ್ಲದೆ, ಸಂಘದ ಮತ್ತು ನಿರ್ದೇಶಕರ ಹೆಸರಿನಲ್ಲಿ ಎಲ್ಲೆಲ್ಲಿ ಆಸ್ತಿಗಳಿವೆ ಎಂಬುದನ್ನು ಗುರುತಿಸಿ ಜಪ್ತಿ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ತಹಸೀಲ್ದಾರ್ ಮತ್ತಿತರ ಅಧಿಕಾರಿಗಳಿಗೆ ಜ್ಞಾಪನಾ ಪತ್ರ ನೀಡಿದ್ದು, ಆಸ್ತಿಗಳನ್ನು ಯಾವುದೇ ರೀತಿಯಲ್ಲಿ ಪರಭಾರೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಅಲ್ಲದೆ, ಸಂಘದ ಮತ್ತು ನಿರ್ದೇಶಕರ ಹೆಸರಲ್ಲಿ ವಿವಿಧ ಬ್ಯಾಂಕ್ ಗಳಲ್ಲಿರುವ ಖಾತೆಗಳನ್ನು ಫ್ರೀಜ್ ಮಾಡಲು ಬ್ಯಾಂಕ್ ಹಾಗೂ ಸೊಸೈಟಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಅಲ್ಲದೆ, ವಂಚನೆ ಬಗ್ಗೆ ನಿಯಮಾನುಸಾರ ವಿಚಾರಣೆ ನಡೆಸಿ ವರದಿ ನೀಡುವಂತೆಯೂ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ಕೋರಿಕೆ ಸಲ್ಲಿಸಿದ್ದಾರೆ.

ಪ್ರಕರಣದ ಬಗ್ಗೆ ಈಗಾಗಲೇ 100 ಮಂದಿ ಹೂಡಿಕೆದಾರರು ತಮಗಾದ ವಂಚನೆಯ ಬಗ್ಗೆ ದಾಖಲೆಗಳನ್ನು ಸಿಇಎನ್ ಅಪರಾಧ ಠಾಣೆಗೆ ಸಲ್ಲಿಸಿದ್ದು, ಇನ್ನೂ 500ರಿಂದ 600 ಜನ ಹೂಡಿಕೆದಾರರು ದಾಖಲೆ ಸಲ್ಲಿಸಲು ಬಾಕಿಯಿದ್ದಾರೆ. ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಯನ್ನು ಜಪ್ತಿ ಮಾಡಿ, ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಸದ್ರಿ ಆಸ್ತಿಯನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಹೂಡಿಕೆದಾರರಿಗೆ ಪರಿಹಾರವನ್ನು ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಡುಪಿ ಸೈಬರ್ ಅಪರಾಧ ಠಾಣೆ ಪೊಲೀಸರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಮಲಾಕ್ಷಿ ಸೊಸೈಟಿ ಬಹುಕೋಟಿ ಹಗರಣ ; ನಪತ್ತಿಯಾಗಿದ್ದ ಅಧ್ಯಕ್ಷ ಲಕ್ಷ್ಮೀನಾರಾಯಣ ಬಂಧನ !
Udupi Kamalakshi Cooperative Society scam, president B. V. Lakshmi Narayana Upadhyaya assets and wealth seized by Police for cheating crores of depositors money invested. Udupi CEN police have arrested B V Laxminarayana, chairman of the Kamalakshi Cooperative Society on charges of siphoning of crores of rupees.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm