ಬ್ರೇಕಿಂಗ್ ನ್ಯೂಸ್
03-01-23 02:15 pm Mangalore Correspondent ಕರಾವಳಿ
ಮಂಗಳೂರು, ಜ.3: ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಆರನೇ ಕ್ಲಾಸ್ ವಿದ್ಯಾರ್ಥಿಗೆ ಪೊಲೀಸರು ಲಾಠಿಯೇಟು ಕೊಟ್ಟು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಪಣಂಬೂರು ಠಾಣೆಯ ಸುನಿಲ್ ಎಂಬ ಪೇದೆಯನ್ನು ಸಸ್ಪೆಂಡ್ ಮಾಡಿದ್ದಾರೆ.
ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದುದರಿಂದ ರಸ್ತೆ ಪೂರ್ತಿ ಬ್ಲಾಕ್ ಆಗಿತ್ತು. ಕರ್ತವ್ಯದಲ್ಲಿದ್ದ ಪಣಂಬೂರು ಪೊಲೀಸರು ರಸ್ತೆಯ ಟ್ರಾಫಿಕ್ ಕ್ಲಿಯರ್ ಮಾಡುವುದರಲ್ಲಿ ನಿರತರಾಗಿದ್ದರು. ಈ ವೇಳೆ, ಕ್ರಿಕೆಟ್ ಆಡಿ ಬೈಕಿನಲ್ಲಿ ಮರಳುತ್ತಿದ್ದ ಹುಡುಗರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ.

ಐದಾರು ಮಂದಿ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಈ ಪೈಕಿ ಆರನೇ ಕ್ಲಾಸ್ ವಿದ್ಯಾರ್ಥಿ ಮತ್ತು ಪಿಯುಸಿ ವಿದ್ಯಾರ್ಥಿಯೂ ಸೇರಿದ್ದರು. ಸಣ್ಣ ಹುಡುಗನಿಗೆ ಲಾಠಿಯಿಂದ ಕೈ, ಬೆನ್ನು, ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಹುಡುಗನನ್ನು ಸ್ಥಳೀಯರು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿದ್ದರು. ಇದೇ ವೇಳೆ, ಸ್ಥಳದಲ್ಲಿ ಜಮಾಯಿಸಿದ್ದ ಯುವಕರು ಪೊಲೀಸರನ್ನು ತರಾಟೆಗೆತ್ತಿಕೊಂಡು ದಬಾಯಿಸಿದ್ದಾರೆ. ನೀವು ಲಾಠಿ ಚಾರ್ಜ್ ಮಾಡಿದ್ದು ಯಾಕೆ, ನೀವು ಭಾರೀ ಲಾಠಿ ಬೀಸುತ್ತೀರಾ ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು.

ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದು ಪೊಲೀಸ್ ಕಮಿಷನರಿಗೆ ದೂರು ನೀಡುವಂತೆ ಮಾಡಿದ್ದರು. ಶಾಸಕರ ಸೂಚನೆಯಂತೆ, ಇಲಾಖಾ ತನಿಖೆ ನಡೆದು ಲಾಠಿ ಬೀಸಿದ್ದ ಪೇದೆ ಸುನೀಲ್ ಎಂಬವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಪಣಂಬೂರು ಎಸ್ಐ ಸ್ಥಳದಲ್ಲಿ ಇದ್ದಾಗಲೇ ಲಾಠಿಯಲ್ಲಿ ದೌರ್ಜನ್ಯ ಎಸಗಲಾಗಿತ್ತು. ಎಸ್ಐ ಬಂದು ಯಾಕೆ ಲಾಠಿ ಚಾರ್ಜ್ ಮಾಡಿದ್ದು ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು. ಬಳಿಕ ಎಸ್ಐ ಸೇರಿ ಹಿರಿಯಧಿಕಾರಿಗಳು ಬಂದು ಸ್ಥಳೀಯರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದರು.
Mangalore Police atrocity at Tannirbhavi beach, Constable Sunil Suspended. The police here allegedly lathi-charged youths at Tannirbhavi beach to clear the traffic block. A class 6 student and PU students also reportedly received blows during the atrocity from the police. Locals took the cops to task. A class 6 student was injured seriously and admitted to the hospital. Local public gheraoed the police and took three cops on spot to task.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am