ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm