ಬ್ರೇಕಿಂಗ್ ನ್ಯೂಸ್
17-10-20 02:22 pm Mangalore Correspondent | Photo - Punik Shetty ಕರಾವಳಿ
ಮಂಗಳೂರು, ಅಕ್ಟೋಬರ್ 17: ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಗಳಿಸಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವಕ್ಕೆ ಎನ್ಆರ್ ಐ ಫೋರಂ ಘಟಕದ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಿದರು.

ಕೊರೊನಾ ನಿರ್ಬಂಧಗಳ ನಡುವೆ, ಸಾಂಪ್ರದಾಯಿಕ ಉತ್ಸವಕ್ಕೆ ಅನುಮತಿ ನೀಡಬೇಕೆಂಬ ನೆಲೆಯಲ್ಲಿ ಜಿಲ್ಲಾಡಳಿತ ದಸರಾ ಉತ್ಸವಕ್ಕೆ ಅವಕಾಶ ನೀಡಿದೆ. ಅದರಂತೆ, ಕುದ್ರೋಳಿ ದೇವಸ್ಥಾನ ಆಡಳಿತ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ಆಚರಿಸಲು ವ್ಯವಸ್ಥೆ ಮಾಡಿಕೊಂಡಿದೆ. ನವರಾತ್ರಿ ಮೊದಲ ದಿವಸವಾದ ಇಂದು ಶಾರದೆ ಹಾಗೂ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠೆ ಮಾಡಲಾಗಿದೆ. ಶಾರದೆ ಮೂರ್ತಿಯ ಮುಂದೆ ದೀಪ ಬೆಳಗಿಸಿ, ಉತ್ಸವಕ್ಕೆ ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಕೃಷ್ಣ ಚಾಲನೆ ನೀಡಿದರು. ಈ ವೇಳೆ, ಕುದ್ರೋಳಿ ದೇವಸ್ಥಾನ ಆಡಳಿತ ಕಮಿಟಿ ಸದಸ್ಯರು ಸೇರಿದಂತೆ ಸೀಮಿತ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.






ಉಳಿದಂತೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಮುಂದಿನ ದ್ವಾರದಲ್ಲಿ ಸ್ಕ್ಯಾನರ್ ಅಳವಡಿಸಿದ್ದು, ತಪಾಸಣೆ ನಡೆಸಿಯೇ ಒಳಬಿಡಲಾಗುತ್ತಿದೆ. ಇನ್ನು ಮಾಸ್ಕ್ ಹಾಕಿದವರನ್ನು ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇಟ್ಟಿದ್ದು, ಭಕ್ತರ ಕೈಗೆ ಸ್ಯಾನಿಟೈಸ್ ಮಾಡಲು ಸ್ವಯಂಸೇವಕರನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ದೇವಸ್ಥಾನ ಒಳಭಾಗದಲ್ಲಿ ಹಗ್ಗದಿಂದ ಕಟ್ಟಲಾಗಿದ್ದು, ಯಾವುದೇ ರೀತಿಯಲ್ಲೂ ಅತ್ತಿತ್ತ ತಿರುಗಾಡುವಂತಿಲ್ಲ. ಶಾರದಾ ಮಂಟಪ, ದೇವಸ್ಥಾನಕ್ಕೆ ತೆರಳಿ ನಿರ್ಗಮನ ದ್ವಾರದ ಮೂಲಕ ಹೊರಬರಬೇಕು.
ಮಧ್ಯಾಹ್ನ ಹೊತ್ತಿಗೆ ಬರುವ ಭಕ್ತರಿಗೆ ಊಟದ ಪ್ಯಾಕೇಜ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನವಾದ ಶನಿವಾರ ಸೀಮಿತ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.
Photo Credit: Punik Shetty
Covid warrior Dr Arathi Krishna Inaugurated Mangalore Dasara 2020 here at Kudroli Temple on Saturday October 2017.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am