ಬ್ರೇಕಿಂಗ್ ನ್ಯೂಸ್
14-01-23 02:30 pm Mangalore Correspondent ಕರಾವಳಿ
ಮಂಗಳೂರು, ಜ.14 : ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಮುಂದುವರೆಸುವ ಮುನ್ಸೂಚನೆ ಸಿಕ್ಕಿದೆ. ಹಿಂದು ದೇವಸ್ಥಾನಗಳ ಉತ್ಸವಗಳಿಗೆ ಅನ್ಯಧರ್ಮೀಯರನ್ನು ದೂರವಿಡುವ ಯತ್ನವಾಗಿ ಉತ್ಸವ ಸಂದರ್ಭದಲ್ಲಿ ವ್ಯಾಪಾರ ನಿಷೇಧಿಸಿ ಹಿಂದು ಸಂಘಟನೆ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇದೀಗ ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಉತ್ಸವದಲ್ಲಿ ಹಿಂದು ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಹೆಸರಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಜ.14ರ ಮಕರ ಸಂಕ್ರಾಂತಿಯಿಂದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಆರಂಭಗೊಳ್ಳುತ್ತದೆ. ಉತ್ಸವ ಸಂದರ್ಭದಲ್ಲಿ ವಿವಿಧ ಮತ, ಧರ್ಮದ ನಂಬಿಕೆಯುಳ್ಳ ವ್ಯಕ್ತಿಗಳು ಜೊತೆಯಾಗಿ ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.


ಈ ನಡುವೆ, ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂದು ನಿರ್ದಿಷ್ಟ ಪಂಗಡವನ್ನು ಗುರಿಯಾಗಿಸಿ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದ ಬಳಿಕ ಬ್ಯಾನರ್ ತೆರವುಗೊಳಿಸಲಾಗಿತ್ತು. ಆದರೆ ಜ.13ರಂದು ಮತ್ತೆ ಅದೇ ರೀತಿಯ ಬ್ಯಾನರ್ ಹಾಕಲಾಗಿದೆ. ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಆಮೂಲಕ ಮತ್ತೆ ಕರಾವಳಿಯಲ್ಲಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಮತ್ತು ಹಿಂದುಗಳಿಂದ ಅನ್ಯ ಧರ್ಮೀಯರನ್ನು ದೂರ ಇಡುವ ಪ್ರಯತ್ನ ನಡೆದಿದೆ.

ಶಾಸಕ ಭರತ್ ಶೆಟ್ಟಿ ಪ್ರತಿನಿಧಿಸುವ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿದೆ. ಇಲ್ಲಿ ಈ ಕಳೆದ ಬಾರಿಯೂ ಇಂತಹದ್ದೇ ಬ್ಯಾನರ್ ಹಾಕಿದ್ದ ವಿವಾದ ನಡೆದಿತ್ತು. ಕಳೆದ ಬಾರಿ ಹಿಜಾಬ್, ಧರ್ಮ ದ್ವೇಷದ ಬ್ಯಾನರ್ ಬಳಿಕ ವಿವಾದ ತಣ್ಣದಾಗಿತ್ತು. ಇದೀಗ ಚುನಾವಣೆ ಕಾಲದಲ್ಲಿ ಮತ್ತೆ ಧರ್ಮ ದ್ವೇಷ ಕದಡುವ ಬ್ಯಾನರ್ ಹಾಕಲಾಗಿದೆ.
Non Hindus not allowed to trade in Kavoor Shree Mahalingeswara Mangalore, banner sparks controversy. Those that believe that idol worship is wrong are not allowed to trade near temple premises is the banner posted by VHP. This was also decided by the temple committee.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm