ಬ್ರೇಕಿಂಗ್ ನ್ಯೂಸ್
18-10-20 01:00 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 18 : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಿರುಕುಳ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಅರಬಿಯನ್ನು ತಕ್ಷಣದಿಂದಲೇ ಸಸ್ಪೆಂಡ್ ಮಾಡಬೇಕೆಂದು ಮಂಗಳೂರು ಯುನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರೂ ಆಗಿರುವ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
2018ರಲ್ಲಿ ವಿವಿಯ ಆಂತರಿಕ ತನಿಖಾ ಸಮಿತಿ ಪ್ರೊಫೆಸರ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ್ದರೂ ವಿವಿ ಆಡಳಿತ ಅದನ್ನು ಮುಚ್ಚಿ ಹಾಕಿತ್ತು. ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡಿದಂತಾಗಿದೆ. ಇತ್ತೀಚೆಗೆ ಕರ್ನಾಟಕ ಮಹಿಳಾ ಆಯೋಗ ವರದಿ ಕೇಳಿದ್ದರಿಂದ ವಿವಿ ಎಚ್ಚತ್ತುಕೊಂಡಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಪತ್ರದಲ್ಲಿ ಡಿಸಿಎಂ ಗಮನ ಸೆಳೆದಿದ್ದಾರೆ.
ಇದೇ ವೇಳೆ, ವಿವಿ ಕುಲಪತಿ ಪಿ.ಎಸ್ ಯಡಪಡಿತ್ತಾಯ ಟೈಂಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿದ್ದು ಪ್ರೊ.ಅರಬಿ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಕಾನೂನು ಸಲಹೆ ಕೇಳಿದ್ದೇವೆ. ಅದು ಇದೇ ಅ.19ರಂದು ಕೈಸೇರುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ಪ್ರಕರಣದ ಕುರಿತು ಮತ್ತು ಒಟ್ಟು ಬೆಳವಣಿಗೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಏನು ಕ್ರಮ ತೆಗೆದುಕೊಳ್ಳಬಹುದು ಮತ್ತು ಒಟ್ಟು ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗಬಹುದು ಎಂದು ಮೀನಮೇಷದ ಮಾತನಾಡಿದ್ದಾರೆ.
ಪ್ರಕರಣದ ಬಗ್ಗೆ 2018ರಲ್ಲಿ ವಿವಿ ಆಂತರಿಕ ತನಿಖಾ ಸಮಿತಿ ವರದಿ ನೀಡಿದ್ದರೂ, ಆಗಿನ ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ. ಖಾನ್ ವರದಿಯನ್ನು ಮುಚ್ಚಿಟ್ಟ ವಿಚಾರದ ಬಗ್ಗೆ ಖಾನ್ ವಿರುದ್ಧ ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ವಿವಿಯ ಮೂಲಗಳಿಂದ ತಿಳಿದುಬಂದಿದೆ.
Mla Bharath Shetty, Mangaluru has urged C N Ashwath Narayan, minister for higher education, to take action against professor Arabi in the department of post-graduate studies in economics, Mangalore University, accused of sexually harassing a student.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm