ಬ್ರೇಕಿಂಗ್ ನ್ಯೂಸ್
19-01-23 12:57 pm Udupi Correspondent ಕರಾವಳಿ
ಉಡುಪಿ, ಜ.19: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ.
ನಾಲ್ಕು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಪ್ರತಾಪ್‌ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್ ಸಭಾಪತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಕಾರ್ಯದರ್ಶಿ, ಉಪಾಧ್ಯಕ್ಷ, ಎಐಸಿಸಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೇರಿದಂತೆ ಪಕ್ಷದ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿ ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದರು. ಜ.13ರಂದು ದಿಢೀರ್ ಆಗಿ ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಜಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಬುಧವಾರ ಹಾಲಾಡಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್‌ಚಂದ್ರ ಶೆಟ್ಟಿ, ರಾಜೀನಾಮೆ ಹಿಂದೆ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪಕ್ಷದಲ್ಲಿ ಕ್ರಿಯಾಶೀಲ ನಾಯಕರಿದ್ದು ಮುಂದಿನ ಚುನಾವಣೆಯಲ್ಲಿ ಉತ್ಸಾಹಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯಲಿದ್ದೇನೆ ಎಂದು ತಿಳಿಸಿದ್ದಾರೆ.
Udupi Congress leader, former Karnataka Legislative Council chairman and MLC K Prathap Chandra Shetty has resigned from his KPCC membership on Wednesday, January 18.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 10:56 am
HK News Desk
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm