ಬ್ರೇಕಿಂಗ್ ನ್ಯೂಸ್
19-01-23 09:41 pm Mangalore Correspondent ಕರಾವಳಿ
ಮಂಗಳೂರು, ಜ.19 : ನಗರದಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ, ಜೂಜು ಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸರ ವಿರುದ್ಧ ಡಿವೈಎಫ್ಐ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನಾ ಧರಣಿ ನಡೆಯಿತು.
ನಗರದ ಜೂಜು ಕೇಂದ್ರಗಳೆಲ್ಲವೂ ದುಡಿದು ತಿನ್ನುವ ಅಮಾಯಕ ಯುವಕರನ್ನು ಬಲಿ ಪಡೆಯುತ್ತಿದೆ. ಮತ್ತೊಂದೆಡೆ ಗಾಂಜಾ ಅಫೀಮುಗಳಿಗೆ ದಾಸರಾದ ವಿದ್ಯಾರ್ಥಿ ಯುವಜನತೆಯನ್ನು ಜಿಲ್ಲೆಯ ಬಲಾಡ್ಯ ಮಾಫಿಯಾಗಳೇ ತಮ್ಮ ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದೆ. ಇದೇ ಯುವಜನತೆ ಸಮಾಜಘಾತುಕ ಚಟುವಟಿಕೆಗಳ ಮೂಲಕ ಅಪಾಯಕಾರಿ ಕ್ರಿಮಿನಲ್ ಗಳಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಮಾಫಿಯಾಗಳಿಗೆ ಮಂಗಳೂರನ್ನು ಸ್ವರ್ಗವಾಗಿಸಲು ಅವಕಾಶ ಕೊಡಬಾರದು ಎಂದು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿದರು.

ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ನಗರದಲ್ಲಿ ಅಕ್ರಮ ದಂಧೆ ನಿರಂತರ ಆಗಿರುವುದರ ಹಿಂದೆ ಪೊಲೀಸ್ ಇಲಾಖೆಯ ಸಹಕಾರ ಇದೆಯೆಂಬ ಆರೋಪ ಕೇಳಿಬರುತ್ತಿವೆ. ಇಂತಹ ಆರೋಪಗಳಿಗೆ ಪೊಲೀಸ್ ಆಯುಕ್ತರು ಉತ್ತರಿಸಬೇಕು. ಹಿಂದೆ ಪೊಲೀಸ್ ಆಯುಕ್ತರಾಗಿದ್ದ ಹಿತೇಂದ್ರ ಮತ್ತು ಚಂದ್ರಶೇಖರ್ ಅವರ ಅಧಿಕಾರಾವಧಿಯಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿತ್ತು ಆದರೆ ಇಂದು ಪೊಲೀಸ್ ಇಲಾಖೆಯ ಮೇಲಿದ್ದ ವಿಶ್ವಾಸಾರ್ಹತೆಯನ್ನು ನಾಗರಿಕ ಸಮಾಜ ಕಳೆದುಕೊಳ್ಳುವಂತಾಗಿದೆ. ನಗರದಲ್ಲಿ ನಡೆಯುವ ಮಾಫಿಯಾಗಳಲ್ಲಿ ಸ್ಥಳೀಯ ಶಾಸಕರ ಹಿಂಬಾಲಕರು ಶಾಮೀಲಾಗಿದ್ದಾರೆಂಬ ಆರೋಪಗಳು ಬಲವಾಗಿ ಕೇಳಿ ಬರುತ್ತಿದ್ದು ಬಿಜೆಪಿ ಅಧಿಕಾರಕ್ಕೇರುವ ಅವಧಿಯಲ್ಲಿ ಮಾಫಿಯಾಗಳನ್ನು, ಅಕ್ರಮಗಳನ್ನು, ಭಯೋತ್ಪಾದನೆ ನಡೆಸುವವರನ್ನು ಹೆಡೆಮುರಿ ಕಟ್ಟುತ್ತೇವೆಂದು ಕೊಟ್ಟ ಭರವಸೆಗಳೆಲ್ಲವೂ ಸುಳ್ಳಾಗಿವೆ ಎಂದರು. ಇತ್ತೀಚೆಗೆ ನಗರದಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೆ ತುತ್ತಾದ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ ಈವರೆಗೂ ಬಿಜೆಪಿ ಸರಕಾರ ಯಾವುದೇ ಪರಿಹಾರ ಧನವನ್ನು ನೀಡಿಲ್ಲ. ಕನಿಷ್ಠ ಚಿಕಿತ್ಸಾ ವೆಚ್ಚವನ್ನೂ ಭರಿಸದೆ ಜನವಿರೋಧಿಯಾಗಿ ವರ್ತಿಸಿದೆ ಎಂದು ಹೇಳಿದರು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ನಿತಿನ್ ಕುತ್ತಾರ್, ಆಶಾ ಬೋಳೂರು, ಶ್ರೀನಾಥ್ ಕಾಟಿಪಳ್ಳ, ಪ್ರಮಿಳಾ ದೇವಾಡಿಗ, ಸಾಧಿಕ್ ಕಣ್ಣೂರು, ಜಗದೀಶ್ ಬಜಾಲ್, ರಿಹಾಬ್, ತಯ್ಯೂಬ್ ಬೆಂಗ್ರರೆ, ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಮುಸ್ತಫ ಕಲ್ಲಕಟ್ಟೆ, ಆಸೀಫ್ ಮುಂತಾದವರು ಉಪಸ್ಥಿತರಿದ್ದರು.
Raise in an increase of illegal activists in Mangalore, Dfyi protest against police officials in city.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm