ಬ್ರೇಕಿಂಗ್ ನ್ಯೂಸ್
21-01-23 03:26 pm Mangalore Correspondent ಕರಾವಳಿ
ಮಂಗಳೂರು, ಜ.21 : ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರು ಮೂಲದ ದಿಶಾ ಅಮೃತ್ ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಮಂದಿ ಯುವ ಯೋಧರು ಮತ್ತು “ನಾರಿಶಕ್ತಿ’ ಎನ್ನುವ ಸ್ತಬ್ಧಚಿತ್ರಕ್ಕೆ ದಿಶಾ ನೇತೃತ್ವ ನೀಡಲಿದ್ದಾರೆ.
2016ರಲ್ಲಿ ನೌಕಾ ಪಡೆ ಸೇರಿದ್ದ ದಿಶಾ ತರಬೇತಿ ಮುಗಿಸಿ 2017ರಲ್ಲಿ ಅಂಡಮಾನ್ ದ್ವೀಪದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚಿಕ್ಕಂದಿನಲ್ಲೇ ಸೇನೆಗೆ ಸೇರಬೇಕು ಎಂಬ ತುಡಿತ ಇತ್ತು. ತಂದೆಗೂ ಸೇನೆ ಸೇರಬೇಕೆಂಬ ಆಸೆ ಇತ್ತು. ನಾನು ಸೇನೆ ಸೇರುವುದಕ್ಕೆ ಪೋಷಕರೇ ಸ್ಫೂರ್ತಿ. ಈಗ ನಾನು ನೌಕಾಪಡೆ ಸೇರಿರುವುದಕ್ಕೆ ಹೆಮ್ಮೆಯೆನಿಸುತ್ತಿದೆ ಎಂದಿದ್ದಾರೆ ದಿಶಾ ಅಮೃತ್.
ಮಂಗಳೂರಿನ ಬೋಳೂರು ನಿವಾಸಿ ಅಮೃತ್ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿಯಾಗಿರುವ ದಿಶಾ, ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ವರೆಗೆ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದರು. ಹೈಸ್ಕೂಲ್ ನಲ್ಲಿದ್ದಾಗಲೇ ಎನ್‌ಸಿಸಿ ಕೇಡೆಟ್ ಆಗಿದ್ದರು. ಬಳಿಕ ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಮಾಡಿದ್ದರು. ಆನಂತರ ಪರೀಕ್ಷೆ ಬರೆದು ನೌಕಾಪಡೆಗೆ ಆಯ್ಕೆಯಾಗಿದ್ದರು. ಸದ್ಯ ನೌಕಾಪಡೆಯಲ್ಲಿ ಅಂಡಮಾನ್ ನಿಕೋಬಾರ್‌ನಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಾರಿಶಕ್ತಿ ಪ್ರದರ್ಶನದಲ್ಲಿ ನೌಕಾಪಡೆಯ ಯುವ ಮಹಿಳಾ ವಿಭಾಗದ ಸಿಬಂದಿ ಪ್ರದರ್ಶನ ನೀಡಲಿದ್ದಾರೆ. ಡಾರ್ನಿಯರ್ ಯುದ್ಧ ವಿಮಾನದ ಪ್ರತಿಕೃತಿಯೂ ಇರಲಿದ್ದು, ಮಹಿಳೆಯರು ಸಾಧನೆ ತೋರಲಿದ್ದಾರೆ.
Lieutenant commander (Lt Cdr) of Indian Navy, Disha Amrith, native of the city, will lead the naval contingent in the Republic Day parade.
The contingent has 144 youth soldiers of the navy and a tableau of Narishakti. Three women officers and five Agniveer men will also be part of the contingent. Sub Lt Valli Meena will also accompany Lt Cdr Disha Amrith.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm