ಬ್ರೇಕಿಂಗ್ ನ್ಯೂಸ್
21-01-23 09:47 pm Mangalore Correspondent ಕರಾವಳಿ
ಪುತ್ತೂರು, ಜ.21 : ಅಡಿಕೆ ಕ್ಯಾನ್ಸರ್ ಕಾರಕ ಎನ್ನುವ ಆರೋಪದ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮುಂದಿನ ವಿಚಾರಣೆ ವೇಳೆಗೆ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬ ಸಂಶೋಧನಾ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಶನಿವಾರ ಪುತ್ತೂರಿನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಅವರು, ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬುದನ್ನು ಸಂಶೋಧನೆ ಮಾಡುವ ಬಗ್ಗೆ ನಿಟ್ಟೆ ವಿಶ್ವವಿದ್ಯಾಲಯದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನ ರಾಮ ಇನ್‌ಸ್ಟಿಟ್ಯೂಟ್ ಜೊತೆಗೂ 2 ವರ್ಷಗಳ ಹಿಂದೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ ಎಂದು ಸಾಬೀತು ಪಡಿಸಲು ಸಂಶೋಧನೆ ನಡೆಯುತ್ತಿದೆ. ಹಂತ ಹಂತವಾಗಿ ವರದಿಗಳು ಬರುತ್ತಿದ್ದು, ನ್ಯಾಯಾಲಯದ ಮುಂದಿನ ವಿಚಾರಣೆ ವೇಳೆ ಈ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ರೂಪಿಸಲಾದ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‌ಡಿಎಫ್) ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ. ರೋಗ ಸಂಶೋಧನೆ, ಬೆಂಬಲ ಬೆಲೆ, ಅಕ್ರಮ ಆಮದು ತಡೆ, ಗುಣಮಟ್ಟ ಪರಿಶೀಲನೆ ಇತ್ಯಾದಿ ಕ್ಷೇತ್ರದಲ್ಲಿ ಎಆರ್‌ಡಿಎಫ್ ಉತ್ತಮವಾದ ಕೆಲಸ ಮಾಡಿದೆ. ಇನ್ನಷ್ಟು ಕೆಲಸ ಮಾಡಲು ಪ್ರತಿಷ್ಠಾನದಲ್ಲಿ ಹಣದ ಕೊರತೆ ಇದೆ ಎಂದು ಹೇಳಿದರು.
ಅಡಿಕೆ ಹಳದಿ ರೋಗ ಸಂಶೋಧನೆಗೆ ಸಂಬಂಧಿಸಿ ಸರ್ಕಾರ ಬಿಡುಗಡೆ ಮಾಡಿದ 25 ಕೋಟಿ ರೂಪಾಯಿಗೂ ಕ್ಯಾಂಪ್ಕೋ ಸಂಸ್ಥೆಗೂ ಸಂಬಂಧವಿಲ್ಲ. ಅದನ್ನು ತೋಟಗಾರಿಕಾ ಇಲಾಖೆ ಮೂಲಕ ನಿರ್ವಹಿಸಲಾಗುತ್ತದೆ. ಎಲೆ ಚುಕ್ಕಿ ರೋಗದಿಂದ ತುತ್ತಾಗಿರುವ ರೈತರಿಗೆ ಪರಿಹಾರ ಕೊಡುವ ಬಗ್ಗೆ ಕ್ಯಾಂಪ್ಕೋ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಹೇಳಿದರು. ಎಲೆ ಚುಕ್ಕಿ ರೋಗಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ನಲ್ಲಿ ಮಂಗಳೂರಿನಲ್ಲಿ ವಿಜ್ಞಾನಿಗಳನ್ನು ಕರೆಸಿ ವಿಚಾರ ಸಂಕಿರಣ ನಡೆಸಿದ್ದೆವು, ಇದರ ಆಧಾರದ ಮೇಲೆ ಸಂಶೋಧನೆಗೆ ಸೆಂಟ್ರಲ್ ಕಮಿಟಿ ನಿರ್ಮಾಣವಾಗಿದೆ, ಆ ಕಮಿಟಿಯ ಶಿಫಾರಸ್ಸಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.
ದಿವಂಗತ ಸುಭ್ರಾಯ್ ಭಟ್ಟರು ಮತ್ತು ಸಾಗರದ ಎಲ್ ಟಿ ತಿಮ್ಮಪ್ಪ ಹೆಗಡೆಯವರ ಸಹಕಾರದಿಂದ ಕ್ಯಾಂಪ್ಕೋ ಸಂಸ್ಥೆ ಈ ಹಂತಕ್ಕೆ ಬಂದು ತಲುಪಿದೆ, ಸುವರ್ಣ ಮಹೋತ್ಸವ ಅಂಗವಾಗಿ ಕ್ಯಾಂಪ್ಕೋ ಫ್ಯಾಕ್ಟರಿಯಲ್ಲಿ ತೆಂಗಿನ ಕಾಯಿಗಳಿಂದ ಉತ್ಪನ್ನ ತಯಾರಿಸಲು ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ ಎಂದು ತಿಳಿಸಿದರು
Areca nut is not cancerous says CAMPCO president Kishor in Puttur.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm